Text copied!
Bibles in Kannada

1 ಅರಸು 4:27-33 in Kannada

Help us?

1 ಅರಸು 4:27-33 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮೇಲೆ ಕಾಣಿಸಿರುವ ಕಾರ್ಯನಿರ್ವಾಹಕರು ತಮಗೆ ನೇಮಕವಾದ ತಿಂಗಳಲ್ಲಿ ಅರಸನಾದ ಸೊಲೊಮೋನನಿಗೂ, ಅವನ ಪಂಕ್ತಿಯಲ್ಲಿ ಊಟಕ್ಕೆ ಕುಳಿತುಕೊಳ್ಳುವವರೆಲ್ಲರಿಗೂ ಬೇಕಾಗುವ ಆಹಾರ ಪದಾರ್ಥಗಳನ್ನು ಯಾವ ಕೊರತೆಯೂ ಇಲ್ಲದೆ ಒದಗಿಸಿಕೊಡುತ್ತಿದ್ದರು.
28 ಇದಲ್ಲದೆ ಅವರು ರಥಾಶ್ವಗಳಿಗಾಗಿಯೂ ಮತ್ತು ಸವಾರಿಕುದುರೆಗಳಿಗಾಗಿಯೂ ನೇಮಕವಾದಷ್ಟು ಜವೆಗೋದಿಯನ್ನು, ಹುಲ್ಲನ್ನೂ ಕುದುರೆಗಳಿದ್ದ ಸ್ಥಳಕ್ಕೇ ತಂದೊಪ್ಪಿಸುತ್ತಿದ್ದರು.
29 ದೇವರು ಸೊಲೊಮೋನನಿಗೆ ವಿಶೇಷವಾದ ಜ್ಞಾನ, ವಿವೇಕಗಳನ್ನೂ, ಸಮುದ್ರ ತೀರದ ಮರಳಿನಷ್ಟು ಅಪರಿಮಿತವಾದ ಮನೋವಿಶಾಲತೆಯನ್ನೂ ಅನುಗ್ರಹಿಸಿದನು.
30 ಅವನ ಜ್ಞಾನವು ಮೂಡಣದೇಶದವರೆಲ್ಲರ ಜ್ಞಾನಕ್ಕಿಂತಲೂ ಐಗುಪ್ತ್ಯರ ಜ್ಞಾನಕ್ಕಿಂತಲೂ ಮಿಗಿಲಾದುದಾಗಿತ್ತು.
31 ಅವನು‍ ಜೆರಹನ ಮಗನಾದ ಏತಾನ್, ಮಾಹೋಲನ ಮಕ್ಕಳಾದ ಹೇಮಾನ್, ಕಲ್ಕೋಲ್, ದರ್ದ ಮೊದಲಾದ ಎಲ್ಲರಿಗಿಂತಲೂ ಜ್ಞಾನಿಯಾಗಿದ್ದನು. ಸುತ್ತಣ ಎಲ್ಲಾ ಜನಾಂಗಗಳಲ್ಲಿ ಅವನ ಹೆಸರು ಸುಪ್ರಸಿದ್ಧವಾಯಿತು.
32 ಅವನ ಜ್ಞಾನೋಕ್ತಿಗಳು ಮೂರು ಸಾವಿರ ಮತ್ತು ಗೀತೆಗಳು ಸಾವಿರದ ಐದು.
33 ಅವನು ಲೆಬನೋನಿನ ದೇವದಾರು ವೃಕ್ಷ ಮೊದಲುಗೊಂಡು ಗೋಡೆಯಲ್ಲಿ ಬೆಳೆಯುವ ಹಿಸ್ಸೋಪ್ ಗಿಡದವರೆಗಿರುವ ಎಲ್ಲಾ ವನಸ್ಪತಿಗಳನ್ನೂ, ಎಲ್ಲಾ ಪಶುಪಕ್ಷಿ, ಜಲಚರಗಳು, ಕ್ರಿಮಿಕೀಟಗಳನ್ನೂ ಕುರಿತು ಪ್ರಸ್ತಾಪಿಸ ಬಲ್ಲವನಾಗಿದ್ದನು.
1 ಅರಸು 4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019