Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - 1 ಅರಸು - 1 ಅರಸು 4

1 ಅರಸು 4:27-34

Help us?
Click on verse(s) to share them!
27ಮೇಲೆ ಕಾಣಿಸಿರುವ ಕಾರ್ಯನಿರ್ವಾಹಕರು ತಮಗೆ ನೇಮಕವಾದ ತಿಂಗಳಲ್ಲಿ ಅರಸನಾದ ಸೊಲೊಮೋನನಿಗೂ, ಅವನ ಪಂಕ್ತಿಯಲ್ಲಿ ಊಟಕ್ಕೆ ಕುಳಿತುಕೊಳ್ಳುವವರೆಲ್ಲರಿಗೂ ಬೇಕಾಗುವ ಆಹಾರ ಪದಾರ್ಥಗಳನ್ನು ಯಾವ ಕೊರತೆಯೂ ಇಲ್ಲದೆ ಒದಗಿಸಿಕೊಡುತ್ತಿದ್ದರು.
28ಇದಲ್ಲದೆ ಅವರು ರಥಾಶ್ವಗಳಿಗಾಗಿಯೂ ಮತ್ತು ಸವಾರಿಕುದುರೆಗಳಿಗಾಗಿಯೂ ನೇಮಕವಾದಷ್ಟು ಜವೆಗೋದಿಯನ್ನು, ಹುಲ್ಲನ್ನೂ ಕುದುರೆಗಳಿದ್ದ ಸ್ಥಳಕ್ಕೇ ತಂದೊಪ್ಪಿಸುತ್ತಿದ್ದರು.
29ದೇವರು ಸೊಲೊಮೋನನಿಗೆ ವಿಶೇಷವಾದ ಜ್ಞಾನ, ವಿವೇಕಗಳನ್ನೂ, ಸಮುದ್ರ ತೀರದ ಮರಳಿನಷ್ಟು ಅಪರಿಮಿತವಾದ ಮನೋವಿಶಾಲತೆಯನ್ನೂ ಅನುಗ್ರಹಿಸಿದನು.
30ಅವನ ಜ್ಞಾನವು ಮೂಡಣದೇಶದವರೆಲ್ಲರ ಜ್ಞಾನಕ್ಕಿಂತಲೂ ಐಗುಪ್ತ್ಯರ ಜ್ಞಾನಕ್ಕಿಂತಲೂ ಮಿಗಿಲಾದುದಾಗಿತ್ತು.
31ಅವನು‍ ಜೆರಹನ ಮಗನಾದ ಏತಾನ್, ಮಾಹೋಲನ ಮಕ್ಕಳಾದ ಹೇಮಾನ್, ಕಲ್ಕೋಲ್, ದರ್ದ ಮೊದಲಾದ ಎಲ್ಲರಿಗಿಂತಲೂ ಜ್ಞಾನಿಯಾಗಿದ್ದನು. ಸುತ್ತಣ ಎಲ್ಲಾ ಜನಾಂಗಗಳಲ್ಲಿ ಅವನ ಹೆಸರು ಸುಪ್ರಸಿದ್ಧವಾಯಿತು.
32ಅವನ ಜ್ಞಾನೋಕ್ತಿಗಳು ಮೂರು ಸಾವಿರ ಮತ್ತು ಗೀತೆಗಳು ಸಾವಿರದ ಐದು.
33ಅವನು ಲೆಬನೋನಿನ ದೇವದಾರು ವೃಕ್ಷ ಮೊದಲುಗೊಂಡು ಗೋಡೆಯಲ್ಲಿ ಬೆಳೆಯುವ ಹಿಸ್ಸೋಪ್ ಗಿಡದವರೆಗಿರುವ ಎಲ್ಲಾ ವನಸ್ಪತಿಗಳನ್ನೂ, ಎಲ್ಲಾ ಪಶುಪಕ್ಷಿ, ಜಲಚರಗಳು, ಕ್ರಿಮಿಕೀಟಗಳನ್ನೂ ಕುರಿತು ಪ್ರಸ್ತಾಪಿಸ ಬಲ್ಲವನಾಗಿದ್ದನು.
34ಎಲ್ಲಾ ಜನಾಂಗಗಳಲ್ಲಿಯೂ ಸೊಲೊಮೋನನ ಜ್ಞಾನದ ವಿಶೇಷತೆಯನ್ನು ಕುರಿತು ಕೇಳಿದ ಅನೇಕ ರಾಜರೂ ಮತ್ತು ವಿದ್ವಾಂಸರು ಅವನ ಜ್ಞಾನವಾಕ್ಯಗಳನ್ನು ಕೇಳುವುದಕ್ಕೋಸ್ಕರ ಬರುತ್ತಿದ್ದರು.

Read 1 ಅರಸು 41 ಅರಸು 4
Compare 1 ಅರಸು 4:27-341 ಅರಸು 4:27-34