Text copied!
Bibles in Kannada

1 ಅರಸು 5:10-16 in Kannada

Help us?

1 ಅರಸು 5:10-16 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಹೀಗೆ ಹೀರಾಮನು ಸೊಲೊಮೋನನಿಗೆ ಬೇಕಾದಷ್ಟು ದೇವದಾರು ಮರಗಳನ್ನೂ ಮತ್ತು ತುರಾಯಿ ಮರಗಳನ್ನೂ ಕೊಡುತ್ತಿದ್ದನು.
11 ಸೊಲೊಮೋನನಾದರೋ ಪ್ರತಿ ವರ್ಷ ಅವನ ಮನೆಯವರ ಆಹಾರಕ್ಕಾಗಿ ಇಪ್ಪತ್ತು ಸಾವಿರ ಕೋರ್ ಗೋದಿಯನ್ನೂ, ಇಪ್ಪತ್ತು ಕೋರ್ ನಿರ್ಮಲವಾದ ಎಣ್ಣೆಯನ್ನೂ ಕೊಡುತ್ತಿದ್ದನು.
12 ಯೆಹೋವನು ತಾನು ವಾಗ್ದಾನ ಮಾಡಿದಂತೆ ಸೊಲೊಮೋನನಿಗೆ ಜ್ಞಾನವನ್ನು ಅನುಗ್ರಹಿಸಿದನು. ಸೊಲೊಮೋನನಿಗೂ ಹೀರಾಮನಿಗೂ ಒಳ್ಳೆಯ ಸಂಬಂಧವಿತ್ತು, ಅವರಿಬ್ಬರು ಪರಸ್ಪರವಾಗಿ ಒಡಂಬಡಿಕೆ ಮಾಡಿಕೊಂಡಿದ್ದರು.
13 ಅರಸನಾದ ಸೊಲೊಮೋನನು ಎಲ್ಲಾ ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಜನರನ್ನು ಬಲವಂತವಾಗಿ ಕರೆತಂದನು.
14 ಅವರಲ್ಲಿ ತಿಂಗಳಿಗೆ ಹತ್ತು ಸಾವಿರ ಜನರಂತೆ ಪ್ರತಿತಿಂಗಳು ಲೆಬನೋನಿಗೆ ಕಳುಹಿಸುತ್ತಿದ್ದನು. ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದರೆ ಎರಡು ತಿಂಗಳು ಮನೆಯಲ್ಲಿರುತ್ತಿದ್ದರು. ಅದೋನೀರಾಮನು ಇವರ ಮುಖ್ಯಸ್ಥನಾಗಿದ್ದನು.
15 ಇದಲ್ಲದೆ ಸೊಲೊಮೋನನಿಗೆ ಎಪ್ಪತ್ತು ಸಾವಿರ ಜನರು ಹೊರೆ ಹೊರುವವರೂ, ಎಂಭತ್ತು ಸಾವಿರ ಜನರು ಕಲ್ಲುಗಣಿಯಲ್ಲಿ ಕೆಲಸ ಮಾಡುವವರೂ ಇದ್ದರು.
16 ಈ ಕೆಲಸದವರ ಮೇಲ್ವಿಚಾರಣೆಗಾಗಿ ಅವನು ಮೂರು ಸಾವಿರದ ಮುನ್ನೂರು ಮೇಸ್ತ್ರಿಗಳನ್ನು ನೇಮಿಸಿದನು.
1 ಅರಸು 5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019