Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - 1 ಅರಸು - 1 ಅರಸು 6

1 ಅರಸು 6:15-34

Help us?
Click on verse(s) to share them!
15ಅನಂತರ ಅವನು ಅದರ ಗೋಡೆಗಳ ಒಳಮೈಯನ್ನು ನೆಲದಿಂದ ಮಾಳಿಗೆಯವರೆಗೆ ದೇವದಾರಿನ ಹಲಗೆಗಳಿಂದ ಹೊದಿಸಿದನು. ನೆಲಕ್ಕೆ ತುರಾಯಿ ಮರದ ಹಲಗೆಗಳನ್ನು ಹಾಕಿದನು.
16ಇದಲ್ಲದೆ ಅವನು ದೇವಾಲಯದೊಳಗೆ ಹಿಂದಿನ ಇಪ್ಪತ್ತು ಮೊಳ ಸ್ಥಳವನ್ನು ಬಿಟ್ಟು ನೆಲದಿಂದ ತೊಲೆಗಳವರೆಗೆ ದೇವದಾರಿನ ಹಲಗೆಗಳಿಂದ ಒಂದು ಗೋಡೆಯನ್ನು ಮಾಡಿಸಿದನು. ಅದರ ಹಿಂದಿನ ಭಾಗವನ್ನು ಗರ್ಭಗೃಹ ಅಥವಾ ಮಹಾಪರಿಶುದ್ಧ ಸ್ಥಳ ಎಂದು ಪ್ರತ್ಯೇಕಿಸಿದನು.
17ದೇವಾಲಯದ ಪರಿಶುದ್ಧ ಸ್ಥಳ ಎನ್ನಿಸಿಕೊಳ್ಳುವ ಮುಂದಿನ ಭಾಗವು ನಲ್ವತ್ತು ಮೊಳ ಉದ್ದವಿತ್ತು.
18ದೇವಾಲಯದೊಳಗೆ ಕಲ್ಲು ಕಾಣಿಸದಂತೆ ಗೋಡೆಗಳನ್ನೆಲ್ಲಾ ಬಳ್ಳಿಗಳು ಮತ್ತು ಹೂವುಗಳು ಕೆತ್ತಿರುವ ದೇವದಾರಿನ ಹಲಿಗೆಗಳಿಂದ ಹೊದಿಸಿದನು.
19ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಇಡುವುದಕ್ಕಾಗಿ ದೇವಾಲಯದೊಳಗೆ ಒಂದು ಭಾಗವನ್ನು ಗರ್ಭಗೃಹವೆಂದು ಪ್ರತ್ಯೇಕಿಸಿದನು.
20ಆ ಗರ್ಭಗೃಹವು ಇಪ್ಪತ್ತು ಮೊಳ ಉದ್ದವೂ, ಇಪ್ಪತ್ತು ಮೊಳ ಅಗಲವೂ, ಇಪ್ಪತ್ತು ಮೊಳ ಎತ್ತರವೂ ಆಗಿತ್ತು. ಅದನ್ನು ಚೊಕ್ಕ ಬಂಗಾರದ ತಗಡಿನಿಂದಲೂ, ಧೂಪವೇದಿಯನ್ನು ದೇವದಾರು ಮರದಿಂದಲೂ ಹೊದಿಸಿದನು.
21ಸೊಲೊಮೋನನು ದೇವಾಲಯದ ಒಳಮೈಯನ್ನು ಚೊಕ್ಕ ಬಂಗಾರದ ತಗಡಿನಿಂದ ಹೊದಿಸಿದನು. ಮಹಾಪರಿಶುದ್ಧ ಸ್ಥಳದ ಎದುರಿನಲ್ಲಿ ಒಂದು ಗೋಡೆಯನ್ನು ಮತ್ತು ಇನ್ನೊಂದು ಗೋಡೆಗೆ ಬಂಗಾರದ ಸರಪಣಿಗಳನ್ನು ಕಟ್ಟಿಸಿದನು.
22ದೇವಾಲಯದ ಎಲ್ಲಾ ಗೋಡೆಗಳನ್ನೂ ಮಹಾಪರಿಶುದ್ಧ ಸ್ಥಳಕ್ಕೆ ಸೇರಿದ ವೇದಿಯನ್ನೂ ಪೂರ್ಣವಾಗಿ ಬಂಗಾರದ ತಗಡಿನಿಂದ ಹೊದಿಸಿದನು.
23ಇದಲ್ಲದೆ ಅವನು ಎಣ್ಣೇ ಮರದಿಂದ ಹತ್ತು ಮೊಳ ಎತ್ತರವಾದ ಎರಡು ಕೆರೂಬಿಗಳನ್ನು ಮಾಡಿಸಿ, ಅವುಗಳನ್ನು ಗರ್ಭಗೃಹದಲ್ಲಿ ಇರಿಸಿದನು.
24ಪ್ರತಿಯೊಂದು ಕೆರೂಬಿಯ ರೆಕ್ಕೆಗಳು ಐದೈದು ಮೊಳ ಉದ್ದವಿದ್ದವು. ಎರಡು ರೆಕ್ಕೆಗಳ ಅಂತರವು ಒಂದು ತುದಿಯಿಂದ ಇನ್ನೊಂದು ತುದಿಗೆ ಹತ್ತು ಮೊಳಗಳಾಗಿದ್ದವು.
25ಇನ್ನೊಂದು ಕೆರೂಬಿಯ ರೆಕ್ಕೆಗಳ ಅಂತರವು ಹತ್ತು ಮೊಳವಾಗಿತ್ತು. ಎರಡೂ ಕೆರೂಬಿಗಳ ಅಳತೆಯೂ ಆಕಾರವೂ ಒಂದೇಯಾಗಿದ್ದವು.
26ಅವೆರಡು ಹತ್ತತ್ತು ಮೊಳ ಎತ್ತರವಾಗಿದ್ದವು.
27ಅವನು ಅವುಗಳನ್ನು ದೇವಾಲಯದ ಗರ್ಭಗೃಹದಲ್ಲಿಡಿಸಿದನು. ಅವುಗಳ ರೆಕ್ಕೆಗಳು ಚಾಚಿದಂತಿದ್ದುದರಿಂದ ಮೊದಲನೆಯ ಕೆರೂಬಿಯ ಒಂದು ರೆಕ್ಕೆಯು ಈಚೆಯ ಗೋಡೆಗೂ, ಎರಡನೆಯ ಕೆರೂಬಿಯ ಒಂದು ರೆಕ್ಕೆಯು ಆಚೆಯ ಗೋಡೆಗೂ ತಗುಲಿದ್ದವು. ಅವುಗಳ ಬೇರೆ ಎರಡು ರೆಕ್ಕೆಗಳು ಮನೆಯ ಮಧ್ಯದಲ್ಲಿ ಒಂದನ್ನೊಂದು ತಗುಲಿದಂತೆ ಇತ್ತು.
28ಈ ಕೆರೂಬಿಗಳು ಬಂಗಾರದ ತಗಡುಗಳಿಂದ ಹೊದಿಸಲ್ಪಟ್ಟಿದ್ದವು.
29ಅವನು ದೇವಾಲಯದ ಎಲ್ಲಾ ಗೋಡೆಗಳಲ್ಲಿ ಹೊರಗೂ ಮತ್ತು ಒಳಗೂ ಕೆರೂಬಿ, ಖರ್ಜೂರವೃಕ್ಷ ಮತ್ತು ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿದನು.
30ದೇವಾಲಯದ ಒಳಗಣ ಮತ್ತು ಹೊರಗಣ ನೆಲವನ್ನು ಬಂಗಾರದ ತಗಡುಗಳಿಂದ ಹೊದಿಸಿದನು.
31ಗರ್ಭಗೃಹದ ಬಾಗಿಲಿಗೆ ಎಣ್ಣೇ ಮರದ ಬಾಗಿಲುಗಳನ್ನು ಇಡಿಸಿದನು. ಚೌಕಟ್ಟು ಪಂಚಕೋನಗಳಿಂದ ಕೂಡಿತ್ತು.
32ಎಣ್ಣೇ ಮರದ ಆ ಎರಡು ಬಾಗಿಲುಗಳಲ್ಲಿಯೂ ಕೆರೂಬಿ, ಖರ್ಜೂರವೃಕ್ಷ ಮತ್ತು ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ ಬಾಗಿಲುಗಳಿಗೆ ಬಂಗಾರದ ತಗಡುಗಳನ್ನು ಹೊದಿಸಿ, ಚಿತ್ರಗಳಿದ್ದಲ್ಲಿ ಆ ತಗಡನ್ನು ಇಡಿಸಿದನು.
33ಇದಲ್ಲದೆ ಅವನು ಪರಿಶುದ್ಧ ಸ್ಥಳದ ಬಾಗಿಲಿಗೆ ಎಣ್ಣೇ ಮರದಿಂದ ಚತುಷ್ಕೋಣದ ಚೌಕಟ್ಟನ್ನು ಮಾಡಿಸಿ
34ಅದಕ್ಕೆ ತುರಾಯಿಮರದ ಎರಡು ಬಾಗಿಲುಗಳನ್ನು ಇಡಿಸಿದನು. ಪ್ರತಿಯೊಂದು ಬಾಗಿಲು ಎರಡು ಭಾಗವುಳ್ಳದ್ದಾಗಿ ಮಡಿಚಬಹುದಾಗಿತ್ತು.

Read 1 ಅರಸು 61 ಅರಸು 6
Compare 1 ಅರಸು 6:15-341 ಅರಸು 6:15-34