Text copied!
Bibles in Kannada

1 ಅರಸು 7:13-35 in Kannada

Help us?

1 ಅರಸು 7:13-35 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅರಸನಾದ ಸೊಲೊಮೋನನು ತೂರ್ ಪಟ್ಟಣದಿಂದ ಹೀರಾಮ್ ಎಂಬುವನನ್ನು ಕರೆಯಿಸಿದನು.
14 ಅವನು ನಫ್ತಾಲಿ ಕುಲದ ಒಬ್ಬ ವಿಧವೆಯಲ್ಲಿ ತೂರ್ ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ, ತಾಮ್ರದ ಕೆಲಸದಲ್ಲಿ ನಿಪುಣನೂ, ಅನುಭವಶಾಲಿಯೂ ಆಗಿದ್ದ ಅವನು ಅರಸನ ಬಳಿಗೆ ಬಂದು ಅರಸನು ಆಜ್ಞಾಪಿಸಿದ ಎಲ್ಲಾ ಕಾರ್ಯಗಳನ್ನು ಮಾಡಿ ಮುಗಿಸಿದನು.
15 ಅವನು ಎರಡು ತಾಮ್ರದ ಕಂಬಗಳನ್ನು ಮಾಡಿದನು. ಅವು ಹದಿನೆಂಟು ಮೊಳ ಎತ್ತರವಿದ್ದವು. ಅವುಗಳ ಸುತ್ತಳತೆಯು ಹನ್ನೆರಡು ಮೊಳ.
16 ಇದಲ್ಲದೆ ಅವನು ತಾಮ್ರವನ್ನು ಎರಕ ಹೊಯ್ದು ಕಂಬಗಳ ಮೇಲೆ ಇಡುವುದಕ್ಕೊಸ್ಕರ ಐದೈದು ಮೊಳ ಎತ್ತರವಾದ ಎರಡು ಕುಂಭಗಳನ್ನೂ,
17 ಒಂದೊಂದಕ್ಕೆ ಏಳೇಳರಂತೆ ಕುಂಭಗಳ ಮೇಲೆ ಹಾಕುವುದಕ್ಕೋಸ್ಕರ ತಾಮ್ರದ ಸರಿಗೆಯ ಜಾಲರಿಗಳನ್ನೂ ಮಾಡಿದನು.
18 ಇದಲ್ಲದೆ ಅವನು ತಾಮ್ರದ ದಾಳಿಂಬೆಹಣ್ಣುಗಳನ್ನು ಮಾಡಿ, ಅವುಗಳನ್ನು ಕಂಬಗಳ ಮೇಲಣ ಪ್ರತಿಯೊಂದು ಕುಂಭದ ಜಾಲರಿಯ ಸುತ್ತಲೂ ಎರಡೆರಡು ಸಾಲಾಗಿ ಸಿಕ್ಕಿಸಿದನು.
19 ಕಂಬಗಳ ಮೇಲಿರುವ ಕುಂಭಗಳ ಒಡಲು ನಾಲ್ಕು ಮೊಳಗಳವರೆಗೆ ಕಮಲದ ಆಕಾರ ಉಳ್ಳದ್ದಾಗಿತ್ತು.
20 ಆ ಕುಂಭಗಳ ಮೇಲಿರುವ ಭಾಗದಲ್ಲಿ ಒಡಲಿನ ಸುತ್ತಲೂ ಜಾಲರಿಯ ಹೊರಗೆ ದಾಳಿಂಬೆ ಹಣ್ಣಿನ ಆಕಾರವುಳ್ಳ ಗುಂಡುಗಳಿದ್ದವು. ಪ್ರತಿಯೊಂದು ಕುಂಭದ ಸುತ್ತಲೂ ಇನ್ನೂರು ಗುಂಡುಗಳನ್ನು ಸಾಲಾಗಿ ಸಿಕ್ಕಿಸಿದನು.
21 ತರುವಾಯ ಅವನು ಆ ಎರಡು ಕಂಬಗಳನ್ನೂ ದೇವಾಲಯದ ಮಂಟಪದ ಬಳಿಯಲ್ಲಿ ನಿಲ್ಲಿಸಿ, ಬಲಗಡೆಯ ಕಂಬಕ್ಕೆ ಯಾಕೀನ್ ಎಂದೂ, ಎಡಗಡೆಯ ಕಂಬಕ್ಕೆ ಬೋವಜ್ ಎಂದು ಹೆಸರಿಟ್ಟನು.
22 ಅವನು ಕಂಬಗಳ ಮೇಲೆ ಕಮಲಾಕಾರವನ್ನು ಮಾಡಿ ಅವುಗಳ ಕೆಲಸವನ್ನು ತೀರಿಸಿದನು.
23 ಅನಂತರ ಹೀರಾಮನು ಸಮುದ್ರ ಎನಿಸಿಕೊಳ್ಳುವ ಒಂದು ಎರಕದ ಪಾತ್ರೆಯನ್ನು ಮಾಡಿದನು. ಅದರ ಬಾಯಿ‍ ಚಂದ್ರಾಕಾರವಾಗಿಯೂ, ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರ ಐದು ಮೊಳ ಮತ್ತು ಸುತ್ತಳತೆ ಮೂವತ್ತು ಮೊಳ.
24 ಅದನ್ನು ಎರಕ ಹೊಯ್ಯುವಾಗ ಅದರ ಅಂಚಿನ ಕೆಳಗೆ ಸುತ್ತಲೂ ಹತ್ತತ್ತು ಮೊಳ ಉದ್ದವಾದ ಬಳ್ಳಿಗಳನ್ನು ಎರಡು ಸಾಲಾಗಿ ಎರಕ ಹೊಯ್ದಿದ್ದನು.
25 ಹನ್ನೆರಡು ಎರಕದ ಹೋರಿಗಳು ಅದನ್ನು ಹೊತ್ತಿದ್ದವು. ಅವುಗಳಲ್ಲಿ ಮೂರು ಉತ್ತರ ದಿಕ್ಕಿಗೂ, ಮೂರು ಪಶ್ಚಿಮ ದಿಕ್ಕಿಗೂ, ಮೂರು ದಕ್ಷಿಣ ದಿಕ್ಕಿಗೂ ಮತ್ತು ಮೂರು ಪೂರ್ವದಿಕ್ಕಿಗೂ ಮುಖಮಾಡಿಕೊಂಡಿದ್ದವು. ಸಮುದ್ರವು ಅವುಗಳ ಬೆನ್ನಿನ ಮೇಲೆ ಇತ್ತು. ಅವುಗಳ ಹಿಂಭಾಗವು ಒಳಗಡೆ ಇತ್ತು.
26 ಪಾತ್ರೆಯು ನಾಲ್ಕು ಬೆರಳು ದಪ್ಪವಾಗಿತ್ತು. ಅದರ ಅಂಚು ಕಮಲದ ಆಕಾರದ ಬಟ್ಟಲನ್ನು ಹೋಲುತ್ತಿತ್ತು. ಅದು ಎರಡು ಸಾವಿರ ಬಾನೆಗಳಷ್ಟು ನೀರು ಹಿಡಿಯುತ್ತಿತ್ತು.
27 ಇದಲ್ಲದೆ ಅವನು ಹತ್ತು ತಾಮ್ರದ ಪೀಠಗಳನ್ನು ಮಾಡಿದನು. ಪ್ರತಿಯೊಂದು ನಾಲ್ಕು ಮೊಳ ಉದ್ದ, ನಾಲ್ಕು ಮೊಳ ಅಗಲ, ಮೂರು ಮೊಳ ಎತ್ತರ ಇತ್ತು.
28 ಅವುಗಳನ್ನು ಮಾಡಿದ ವಿಧಾನ ಹೇಗೆಂದರೆ, ಅವುಗಳಲ್ಲಿ ನಿಲುವು ಪಟ್ಟಿಗಳಿಂದ ಕೂಡಿದ ಅಡ್ಡಪಟ್ಟಿಗಳಿದ್ದವು.
29 ಆ ಅಡ್ಡಪಟ್ಟಿಗಳ ಮೇಲೆ ಸಿಂಹ, ಹೋರಿ ಮತ್ತು ಕೆರೂಬಿ ಇವುಗಳ ಚಿತ್ರಗಳಿದ್ದವು. ನಿಲುವುಪಟ್ಟಿಗಳಿಗೂ ಇದೇ ಅಲಂಕಾರವಿತ್ತು. ಸಿಂಹ, ಹೋರಿ ಇವುಗಳ ಮೇಲೂ ಕೆಳಗೂ ತೋರಣ ಚಿತ್ರಗಳಿದ್ದವು.
30 ಪ್ರತಿಯೊಂದು ಪೀಠಕ್ಕೆ ನಾಲ್ಕು ತಾಮ್ರದ ಗಾಲಿಗಳೂ ಅಚ್ಚುಗಳೂ ಇದ್ದವು. ಪ್ರತಿಯೊಂದು ನಿಲುವುಪಟ್ಟಿಯ ಮೇಲಣ ತುದಿಯಲ್ಲಿ ಎರಕ ಹೊಯ್ದ ತಾಮ್ರದ ಹಿಡಿಗಳಿದ್ದವು. ಅವು ಪೀಠದ ಮೇಲಣ ಗಂಗಾಳವನ್ನು ಹಿಡಿಯುತ್ತಿದ್ದವು. ಅವುಗಳ ಹೊರಮೈಗೆ ತೋರಣ ಚಿತ್ರಗಳಿದ್ದವು.
31 ಗಂಗಾಳವನ್ನು ಇಡುವುದಕ್ಕೋಸ್ಕರ ಪೀಠದ ಮೇಲಣ ಭಾಗದಲ್ಲಿ ಒಂದು ಅಥವಾ ಒಂದುವರೆ ಮೊಳ ಎತ್ತರವಾದ ಬಾಯಿತ್ತು. ಚಕ್ರಾಕಾರವಾಗಿರುವ ಈ ಬಾಯಿಯು ಒಂದುವರೆ ಮೊಳ ಅಗಲವಾಗಿತ್ತು. ಇದರ ಮೇಲೆಯೂ ಚಿತ್ರಗಳಿದ್ದವು. ಇದಕ್ಕೆ ಆಧಾರವಾದ ಅಡ್ಡಪಟ್ಟಿಗಳು ಚಕ್ರಾಕಾರವಾಗಿರದೆ ಚೌಕಾಕಾರವಾಗಿದ್ದವು.
32 ಮೇಲೆ ಕಂಡ ನಾಲ್ಕು ಗಾಲಿಗಳು ಅಡ್ಡಪಟ್ಟಿಗಳ ಕೆಳಗಿದ್ದವು. ತಿರುಗೋಲು ಮತ್ತು ಪೀಠವು ಅಖಂಡವಾಗಿದ್ದವು. ಪ್ರತಿಯೊಂದು ಗಾಲಿಯು ಒಂದುವರೆ ಮೊಳ ಎತ್ತರವಿತ್ತು.
33 ಅವು ಸಾಧಾರಣವಾದ ಬಂಡಿಗಳ ಗಾಲಿಗಳಂತೆಯೇ ಇದ್ದವು. ಆದರೆ ಅವುಗಳ ಕಟ್ಟು, ಅರ, ಕುಂಭ ಇವುಗಳಿಗೆ ಸಂಬಂಧಪಟ್ಟ ತಿರುಗೋಲು ತಾಮ್ರದವುಗಳು.
34 ಪ್ರತಿಯೊಂದು ಪೀಠದ ತುದಿಯಲ್ಲಿದ್ದ ನಾಲ್ಕು ಹಿಡಿಗಳು ಪೀಠದೊಡನೆ ಅಖಂಡವಾಗಿದ್ದವು.
35 ಪೀಠದ ಮೇಲಣ ಭಾಗದಲ್ಲಿದ್ದ ಚಕ್ರಾಕಾರವಾದ ಬಾಯಿಯು ಅರ್ಧ ಮೊಳ ಎತ್ತರವಾಗಿತ್ತು. ಪೀಠದ ಮೇಲಿನ ಭಾಗದಲ್ಲಿದ್ದ ಹಿಡಿಗಳೂ ಅಡ್ಡ ಪಟ್ಟಿಗಳೂ ಅದರೊಡನೆ ಅಖಂಡವಾಗಿದ್ದವು.
1 ಅರಸು 7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019