Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - 1 ಅರಸು - 1 ಅರಸು 7

1 ಅರಸು 7:25-38

Help us?
Click on verse(s) to share them!
25ಹನ್ನೆರಡು ಎರಕದ ಹೋರಿಗಳು ಅದನ್ನು ಹೊತ್ತಿದ್ದವು. ಅವುಗಳಲ್ಲಿ ಮೂರು ಉತ್ತರ ದಿಕ್ಕಿಗೂ, ಮೂರು ಪಶ್ಚಿಮ ದಿಕ್ಕಿಗೂ, ಮೂರು ದಕ್ಷಿಣ ದಿಕ್ಕಿಗೂ ಮತ್ತು ಮೂರು ಪೂರ್ವದಿಕ್ಕಿಗೂ ಮುಖಮಾಡಿಕೊಂಡಿದ್ದವು. ಸಮುದ್ರವು ಅವುಗಳ ಬೆನ್ನಿನ ಮೇಲೆ ಇತ್ತು. ಅವುಗಳ ಹಿಂಭಾಗವು ಒಳಗಡೆ ಇತ್ತು.
26ಪಾತ್ರೆಯು ನಾಲ್ಕು ಬೆರಳು ದಪ್ಪವಾಗಿತ್ತು. ಅದರ ಅಂಚು ಕಮಲದ ಆಕಾರದ ಬಟ್ಟಲನ್ನು ಹೋಲುತ್ತಿತ್ತು. ಅದು ಎರಡು ಸಾವಿರ ಬಾನೆಗಳಷ್ಟು ನೀರು ಹಿಡಿಯುತ್ತಿತ್ತು.
27ಇದಲ್ಲದೆ ಅವನು ಹತ್ತು ತಾಮ್ರದ ಪೀಠಗಳನ್ನು ಮಾಡಿದನು. ಪ್ರತಿಯೊಂದು ನಾಲ್ಕು ಮೊಳ ಉದ್ದ, ನಾಲ್ಕು ಮೊಳ ಅಗಲ, ಮೂರು ಮೊಳ ಎತ್ತರ ಇತ್ತು.
28ಅವುಗಳನ್ನು ಮಾಡಿದ ವಿಧಾನ ಹೇಗೆಂದರೆ, ಅವುಗಳಲ್ಲಿ ನಿಲುವು ಪಟ್ಟಿಗಳಿಂದ ಕೂಡಿದ ಅಡ್ಡಪಟ್ಟಿಗಳಿದ್ದವು.
29ಆ ಅಡ್ಡಪಟ್ಟಿಗಳ ಮೇಲೆ ಸಿಂಹ, ಹೋರಿ ಮತ್ತು ಕೆರೂಬಿ ಇವುಗಳ ಚಿತ್ರಗಳಿದ್ದವು. ನಿಲುವುಪಟ್ಟಿಗಳಿಗೂ ಇದೇ ಅಲಂಕಾರವಿತ್ತು. ಸಿಂಹ, ಹೋರಿ ಇವುಗಳ ಮೇಲೂ ಕೆಳಗೂ ತೋರಣ ಚಿತ್ರಗಳಿದ್ದವು.
30ಪ್ರತಿಯೊಂದು ಪೀಠಕ್ಕೆ ನಾಲ್ಕು ತಾಮ್ರದ ಗಾಲಿಗಳೂ ಅಚ್ಚುಗಳೂ ಇದ್ದವು. ಪ್ರತಿಯೊಂದು ನಿಲುವುಪಟ್ಟಿಯ ಮೇಲಣ ತುದಿಯಲ್ಲಿ ಎರಕ ಹೊಯ್ದ ತಾಮ್ರದ ಹಿಡಿಗಳಿದ್ದವು. ಅವು ಪೀಠದ ಮೇಲಣ ಗಂಗಾಳವನ್ನು ಹಿಡಿಯುತ್ತಿದ್ದವು. ಅವುಗಳ ಹೊರಮೈಗೆ ತೋರಣ ಚಿತ್ರಗಳಿದ್ದವು.
31ಗಂಗಾಳವನ್ನು ಇಡುವುದಕ್ಕೋಸ್ಕರ ಪೀಠದ ಮೇಲಣ ಭಾಗದಲ್ಲಿ ಒಂದು ಅಥವಾ ಒಂದುವರೆ ಮೊಳ ಎತ್ತರವಾದ ಬಾಯಿತ್ತು. ಚಕ್ರಾಕಾರವಾಗಿರುವ ಈ ಬಾಯಿಯು ಒಂದುವರೆ ಮೊಳ ಅಗಲವಾಗಿತ್ತು. ಇದರ ಮೇಲೆಯೂ ಚಿತ್ರಗಳಿದ್ದವು. ಇದಕ್ಕೆ ಆಧಾರವಾದ ಅಡ್ಡಪಟ್ಟಿಗಳು ಚಕ್ರಾಕಾರವಾಗಿರದೆ ಚೌಕಾಕಾರವಾಗಿದ್ದವು.
32ಮೇಲೆ ಕಂಡ ನಾಲ್ಕು ಗಾಲಿಗಳು ಅಡ್ಡಪಟ್ಟಿಗಳ ಕೆಳಗಿದ್ದವು. ತಿರುಗೋಲು ಮತ್ತು ಪೀಠವು ಅಖಂಡವಾಗಿದ್ದವು. ಪ್ರತಿಯೊಂದು ಗಾಲಿಯು ಒಂದುವರೆ ಮೊಳ ಎತ್ತರವಿತ್ತು.
33ಅವು ಸಾಧಾರಣವಾದ ಬಂಡಿಗಳ ಗಾಲಿಗಳಂತೆಯೇ ಇದ್ದವು. ಆದರೆ ಅವುಗಳ ಕಟ್ಟು, ಅರ, ಕುಂಭ ಇವುಗಳಿಗೆ ಸಂಬಂಧಪಟ್ಟ ತಿರುಗೋಲು ತಾಮ್ರದವುಗಳು.
34ಪ್ರತಿಯೊಂದು ಪೀಠದ ತುದಿಯಲ್ಲಿದ್ದ ನಾಲ್ಕು ಹಿಡಿಗಳು ಪೀಠದೊಡನೆ ಅಖಂಡವಾಗಿದ್ದವು.
35ಪೀಠದ ಮೇಲಣ ಭಾಗದಲ್ಲಿದ್ದ ಚಕ್ರಾಕಾರವಾದ ಬಾಯಿಯು ಅರ್ಧ ಮೊಳ ಎತ್ತರವಾಗಿತ್ತು. ಪೀಠದ ಮೇಲಿನ ಭಾಗದಲ್ಲಿದ್ದ ಹಿಡಿಗಳೂ ಅಡ್ಡ ಪಟ್ಟಿಗಳೂ ಅದರೊಡನೆ ಅಖಂಡವಾಗಿದ್ದವು.
36ಅಡ್ಡಪಟ್ಟಿಗಳಿಗೂ ಹಿಡಿಗಳ ಹೊರಮೈಗೂ ಸ್ಥಳವಿದ್ದ ಕಡೆಗೆ ಕೆರೂಬಿ, ಸಿಂಹ, ಖರ್ಜೂರವೃಕ್ಷ ಇವುಗಳ ಚಿತ್ರಗಳನ್ನೂ ಈ ಚಿತ್ರಗಳ ಸುತ್ತಲೂ ತೋರಣ ಚಿತ್ರಗಳನ್ನೂ ಮಾಡಿಸಿದನು.
37ಲೋಹಗಳನ್ನು ಒಂದೇ ಸಾರಿ ಕರಗಿಸಿ ಆ ಹತ್ತು ಪೀಠಗಳನ್ನು ಮಾಡಿದನು. ಅವುಗಳ ಆಕಾರವು ಅಳತೆಯೂ ಒಂದೇಯಾಗಿತ್ತು.
38ಇದಲ್ಲದೆ ಅವನು ನಲ್ವತ್ತು ಬತ್ ನೀರು ಹಿಡಿಯುವ ನಾಲ್ಕು ಮೊಳ ಅಗಲವಾದ ಹತ್ತು ಗಂಗಾಳಗಳನ್ನು ಮಾಡಿ, ಪ್ರತಿಯೊಂದು ಪೀಠದ ಮೇಲೆ ಒಂದೊಂದನ್ನು ಇಟ್ಟನು.

Read 1 ಅರಸು 71 ಅರಸು 7
Compare 1 ಅರಸು 7:25-381 ಅರಸು 7:25-38