Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - 1 ಅರಸು - 1 ಅರಸು 7

1 ಅರಸು 7:37-47

Help us?
Click on verse(s) to share them!
37ಲೋಹಗಳನ್ನು ಒಂದೇ ಸಾರಿ ಕರಗಿಸಿ ಆ ಹತ್ತು ಪೀಠಗಳನ್ನು ಮಾಡಿದನು. ಅವುಗಳ ಆಕಾರವು ಅಳತೆಯೂ ಒಂದೇಯಾಗಿತ್ತು.
38ಇದಲ್ಲದೆ ಅವನು ನಲ್ವತ್ತು ಬತ್ ನೀರು ಹಿಡಿಯುವ ನಾಲ್ಕು ಮೊಳ ಅಗಲವಾದ ಹತ್ತು ಗಂಗಾಳಗಳನ್ನು ಮಾಡಿ, ಪ್ರತಿಯೊಂದು ಪೀಠದ ಮೇಲೆ ಒಂದೊಂದನ್ನು ಇಟ್ಟನು.
39ಐದು ಪೀಠಗಳನ್ನು ದೇವಾಲಯದ ಬಲಗಡೆಯಲ್ಲಿಯೂ, ಐದು ಪೀಠಗಳನ್ನು ಎಡಗಡೆಯಲ್ಲಿಯೂ ಇಟ್ಟನು. ಸಮುದ್ರವೆನಿಸಿಕೊಳ್ಳುವ ಪಾತ್ರೆಯನ್ನು ದೇವಾಲಯದ ಬಲಗಡೆಯಲ್ಲಿ ಅಂದರೆ ಪ್ರಾಕಾರದ ಆಗ್ನೇಯ ದಿಕ್ಕಿನಲ್ಲಿರಿಸಿದನು.
40ಇದಲ್ಲದೆ ಹೀರಾಮನು ಬಟ್ಟಲುಗಳನ್ನೂ, ಸಲಿಕೆಗಳನ್ನೂ, ಬೋಗುಣಿಗಳನ್ನೂ ಮಾಡಿದನು. ಅವನು ಸೊಲೊಮೋನನ ಅಪ್ಪಣೆಯಂತೆ ದೇವಾಲಯಕ್ಕೋಸ್ಕರ ಹೀರಾಮನು ಮಾಡಿಸಿದ ಒಟ್ಟು ಸಾಮಾನುಗಳ ಪಟ್ಟಿ.
41ಎರಡು ಕಂಬಗಳು ಅವುಗಳ ಮೇಲಿನ ಎರಡು ಕುಂಭಗಳು, ಕುಂಭಗಳ ಮೇಲೆ ಹಾಕುವುದಕ್ಕೋಸ್ಕರ ಎರಡು ಜಾಲರಿಗಳು
42ಜಾಲರಿಗಳ ಮೇಲೆ ಎರಡೆರಡು ಸಾಲಾಗಿ ಸಿಕ್ಕಿಸುವುದಕ್ಕೋಸ್ಕರ ತಾಮ್ರದ ನಾನೂರು ದಾಳಿಂಬಹಣ್ಣುಗಳು,
43ಹತ್ತು ಪೀಠಗಳು, ಅವುಗಳ ಮೇಲಿದ್ದ ಹತ್ತು ಗಂಗಾಳಗಳು,
44ಸಮುದ್ರವೆನಿಸಿಕೊಳ್ಳುವ ಪಾತ್ರೆಯೂ, ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳು,
45ಹಂಡೆ, ಸಲಿಕೆ ಬೋಗುಣಿಗಳು ಇವೇ. ಹೀರಾಮನು ಅರಸನಾದ ಸೊಲೊಮೋನನ ಅಪ್ಪಣೆಯಂತೆ ಯೆಹೋವನ ಆಲಯಕ್ಕೋಸ್ಕರ ಈ ಎಲ್ಲಾ ಸಾಮಾನುಗಳನ್ನು ರುಜುವಾತು ಪಡಿಸಿ ತಾಮ್ರದಿಂದ ಮಾಡಿಸಿದನು.
46ಅರಸನು ಯೊರ್ದನಿನ ತಗ್ಗಿನಲ್ಲಿ ಸುಕ್ಕೋತಿಗೂ ಮತ್ತು ಚಾರೆತಾನಿಗೂ ಮಧ್ಯದಲ್ಲಿರುವ ಜೇಡಿ ಮಣ್ಣು ಇರುವ ನೆಲದಲ್ಲಿ ಎರಕ ಹೊಯ್ಯಿಸಿದನು.
47ಸೊಲೊಮೋನನು ತಾನು ಮಾಡಿಸಿದ ಸಾಮಾನುಗಳು ಅನೇಕವಾಗಿದ್ದರಿಂದ ಅವುಗಳ ತಾಮ್ರದ ತೂಕವು ಎಷ್ಟೆಂಬುದನ್ನು ಗೊತ್ತುಮಾಡಲಾಗಲ್ಲಿಲ್ಲ.

Read 1 ಅರಸು 71 ಅರಸು 7
Compare 1 ಅರಸು 7:37-471 ಅರಸು 7:37-47