Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - 1 ಅರಸು - 1 ಅರಸು 7

1 ಅರಸು 7:9-17

Help us?
Click on verse(s) to share them!
9ಈ ಎಲ್ಲಾ ಮಂದಿರಗಳನ್ನೂ ಅವುಗಳ ಸುತ್ತು ಗೋಡೆಯನ್ನೂ, ದೊಡ್ಡ ಪ್ರಾಕಾರದ ಸುತ್ತು ಗೋಡೆಯನ್ನೂ, ಅಸ್ತಿವಾರದ ಮೇಲಣಿಂದ ಕಡೇ ವರಸೆಯವರೆಗೆ ಅಳತೆಯ ಮೇರೆಗೆ ಕೆತ್ತಲ್ಪಟ್ಟ ಎರಡು ಮಗ್ಗುಲಿಗೂ ಗರಗಸದಿಂದ ಕೊಯ್ಯಲ್ಪಟ್ಟಂಥ ಶ್ರೇಷ್ಠವಾದ ಕಲ್ಲುಗಳಿಂದ ಕಟ್ಟಿಸಿದನು.
10ಅಸ್ತಿವಾರಕ್ಕೆ ಹಾಕಿದ ಶ್ರೇಷ್ಠವಾದ ದೊಡ್ಡ ಕಲ್ಲುಗಳು ಎಂಟು ಮೊಳ ಹಾಗೂ ಹತ್ತು ಮೊಳ ಉದ್ದವಾಗಿದ್ದವು.
11ಅಸ್ತಿವಾರದ ಮೇಲಣ ಭಾಗಕ್ಕೆ ಅಳತೆಯ ಮೇರೆಗೆ ಕೆತ್ತಿದ ಶ್ರೇಷ್ಠವಾದ ಕಲ್ಲುಗಳನ್ನೂ, ದೇವದಾರಿನ ಮರವನ್ನೂ ಉಪಯೋಗಿಸಿದನು.
12ಒಳಗಿನ ಪ್ರಾಕಾರವೆನ್ನಿಸಿಕೊಳ್ಳುವ ಯೆಹೋವನ ಆಲಯದ ಪ್ರಾಕಾರಕ್ಕೂ ಅರಮನೆಯ ಪ್ರಾಕಾರಕ್ಕೂ ಹೇಗೋ ಹಾಗೆಯೇ ಎಲ್ಲಾ ಮಂದಿರಗಳ ಸುತ್ತಲಿರುವ ದೊಡ್ಡ ಪ್ರಾಕಾರಕ್ಕೆ ಮೂರು ಸಾಲು ಕಲ್ಲಿನ ಕಂಬಗಳೂ, ಒಂದು ಸಾಲು ದೇವದಾರಿನ ಮರದ ಕಂಬಗಳೂ ಇದ್ದವು.
13ಅರಸನಾದ ಸೊಲೊಮೋನನು ತೂರ್ ಪಟ್ಟಣದಿಂದ ಹೀರಾಮ್ ಎಂಬುವನನ್ನು ಕರೆಯಿಸಿದನು.
14ಅವನು ನಫ್ತಾಲಿ ಕುಲದ ಒಬ್ಬ ವಿಧವೆಯಲ್ಲಿ ತೂರ್ ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ, ತಾಮ್ರದ ಕೆಲಸದಲ್ಲಿ ನಿಪುಣನೂ, ಅನುಭವಶಾಲಿಯೂ ಆಗಿದ್ದ ಅವನು ಅರಸನ ಬಳಿಗೆ ಬಂದು ಅರಸನು ಆಜ್ಞಾಪಿಸಿದ ಎಲ್ಲಾ ಕಾರ್ಯಗಳನ್ನು ಮಾಡಿ ಮುಗಿಸಿದನು.
15ಅವನು ಎರಡು ತಾಮ್ರದ ಕಂಬಗಳನ್ನು ಮಾಡಿದನು. ಅವು ಹದಿನೆಂಟು ಮೊಳ ಎತ್ತರವಿದ್ದವು. ಅವುಗಳ ಸುತ್ತಳತೆಯು ಹನ್ನೆರಡು ಮೊಳ.
16ಇದಲ್ಲದೆ ಅವನು ತಾಮ್ರವನ್ನು ಎರಕ ಹೊಯ್ದು ಕಂಬಗಳ ಮೇಲೆ ಇಡುವುದಕ್ಕೊಸ್ಕರ ಐದೈದು ಮೊಳ ಎತ್ತರವಾದ ಎರಡು ಕುಂಭಗಳನ್ನೂ,
17ಒಂದೊಂದಕ್ಕೆ ಏಳೇಳರಂತೆ ಕುಂಭಗಳ ಮೇಲೆ ಹಾಕುವುದಕ್ಕೋಸ್ಕರ ತಾಮ್ರದ ಸರಿಗೆಯ ಜಾಲರಿಗಳನ್ನೂ ಮಾಡಿದನು.

Read 1 ಅರಸು 71 ಅರಸು 7
Compare 1 ಅರಸು 7:9-171 ಅರಸು 7:9-17