Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - 1 ಅರಸು - 1 ಅರಸು 8

1 ಅರಸು 8:2-9

Help us?
Click on verse(s) to share them!
2ಇಸ್ರಾಯೇಲರೆಲ್ಲರೂ ಏಳನೆಯ ತಿಂಗಳಾದ ಆಶ್ವೀಜ ಮಾಸದಲ್ಲಿ ಜಾತ್ರೆಗೋಸ್ಕರ ಅರಸನಾದ ಸೊಲೊಮೋನನ ಬಳಿಗೆ ಕೂಡಿಬಂದರು.
3ಇಸ್ರಾಯೇಲರ ಎಲ್ಲಾ ಹಿರಿಯರು ಒಟ್ಟಾಗಿ ಬಂದಾಗ ಯಾಜಕರು ಯೆಹೋವನ ಮಂಜೂಷವನ್ನು ಹೊತ್ತುಕೊಂಡರು.
4ಉಳಿದ ಯಾಜಕರೂ ಮತ್ತು ಲೇವಿಯರೂ ದೇವದರ್ಶನದ ಗುಡಾರ, ಅದರಲ್ಲಿದ್ದ ಪರಿಶುದ್ಧವಸ್ತು ಇವುಗಳನ್ನು ಹೊತ್ತುಕೊಂಡರು.
5ಅರಸನಾದ ಸೊಲೊಮೋನನು ಅಲ್ಲಿ ಕೂಡಿ ಬಂದಿದ್ದ ಎಲ್ಲಾ ಇಸ್ರಾಯೇಲರೂ ಮಂಜೂಷದ ಮುಂದೆ ಅಸಂಖ್ಯವಾದ ಕುರಿದನಗಳನ್ನು ಯಜ್ಞಮಾಡಿದರು.
6ಯಾಜಕರು ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗೆ ಅದಕ್ಕೆ ನೇಮಕವಾದ ಸ್ಥಳದಲ್ಲಿ ಇಟ್ಟರು.
7ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದವುಗಳಾಗಿದ್ದುದರಿಂದ ಮಂಜೂಷವೂ ಅದರ ಕೋಲುಗಳೂ ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು.
8ಆ ಕೋಲುಗಳು ಬಹಳ ಉದ್ದವಾಗಿದ್ದುದರಿಂದ ಅವುಗಳ ತುದಿಗಳು ಗರ್ಭಗೃಹದ ಎದುರಿನಲ್ಲಿರುವ ಪರಿಶುದ್ಧ ಸ್ಥಳದಲ್ಲಿ ನಿಂತವರಿಗೆ ಕಾಣಿಸಿದರೂ ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ. ಅವು ಇಂದಿನವರೆಗೂ ಅಲ್ಲೇ ಇವೆ.
9ಮಂಜೂಷದಲ್ಲಿ ಎರಡು ಕಲ್ಲಿನ ಹಲಿಗೆಗಳ ಹೊರತಾಗಿ ಬೇರೇನೂ ಇರಲಿಲ್ಲ. ಯೆಹೋವನು ಐಗುಪ್ತದಿಂದ ಬಂದ ಇಸ್ರಾಯೇಲರೊಡನೆ ಹೋರೇಬ್ ಬೆಟ್ಟದ ಬಳಿಯಲ್ಲಿ ಒಡಂಬಡಿಕೆ ಮಾಡಿಕೊಂಡ ಮೇಲೆ ಮೋಶೆಯು ಅವುಗಳನ್ನು ಅದರಲ್ಲಿರಿಸಿದನು.

Read 1 ಅರಸು 81 ಅರಸು 8
Compare 1 ಅರಸು 8:2-91 ಅರಸು 8:2-9