Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - 1 ಅರಸು - 1 ಅರಸು 8

1 ಅರಸು 8:46-62

Help us?
Click on verse(s) to share them!
46“ಅವರು ನಿನಗೆ ವಿರುದ್ಧವಾಗಿ ಪಾಪ ಮಾಡಬಹುದು. ಪಾಪಮಾಡದ ಮನುಷ್ಯನು ಒಬ್ಬನೂ ಇಲ್ಲ. ನೀನು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ, ಸಮೀಪದಲ್ಲಾಗಲಿ ಇರುವ ತಮ್ಮ ದೇಶಕ್ಕೆ ಅವರನ್ನು ಒಯ್ದಾಗ,
47ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು, ನಿನ್ನ ಅನುಗ್ರಹದಿಂದ ತಮ್ಮ ಪೂರ್ವಿಕರಿಗೆ ದೊರಕಿದ ದೇಶದ ಕಡೆಗೂ, ನೀನು ಆರಿಸಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿಗೋಸ್ಕರ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು,
48‘ನಾವು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು’ ಎಂದು ಒಪ್ಪಿ ಪೂರ್ಣಮನಸ್ಸಿನಿಂದ ನಿನ್ನನ್ನು ಪ್ರಾರ್ಥಿಸುವುದಾದರೆ,
49ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅವರ ಪ್ರಾರ್ಥನೆಯನ್ನು ಲಾಲಿಸಿ ಅವರ ನ್ಯಾಯವನ್ನು ಸ್ಥಾಪಿಸು.
50ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನೀನು ಬಿಡಿಸಿದ ಈ ಜನರು ನಿನ್ನ ಸ್ವಕೀಯ ಜನರಾಗಿದ್ದಾರೆಂಬುದನ್ನು ನೆನಪುಮಾಡಿಕೊ.
51ಅವರು ನಿನಗೆ ವಿರುದ್ಧವಾಗಿ ಮಾಡಿದ ಎಲ್ಲಾ ಅಪರಾಧ ದ್ರೋಹಗಳನ್ನು ಕ್ಷಮಿಸಿ ಅವರನ್ನು ಸೆರೆಯೊಯ್ದವರ ಮನಸ್ಸಿನಲ್ಲಿ ಅವರ ಮೇಲೆ ದಯೆಹುಟ್ಟಿಸು.
52ನಿನ್ನ ಸೇವಕನ ಮೇಲೆಯೂ, ನಿನ್ನ ಪ್ರಜೆಗಳಾದ ಇಸ್ರಾಯೇಲರ ಮೇಲೆಯೂ ಕಟಾಕ್ಷವಿಟ್ಟು ಅವರು ಪ್ರಾರ್ಥಿಸುವಾಗೆಲ್ಲಾ ಅವರ ವಿಜ್ಞಾಪನೆಗಳನ್ನು ಲಾಲಿಸು.
53ಕರ್ತನೇ, ಯೆಹೋವನೇ, ನೀನು ನಮ್ಮ ಪೂರ್ವಿಕರನ್ನು ಐಗುಪ್ತದೇಶದಿಂದ ಬಿಡಿಸುವಾಗ ಅವರಿಗೆ ನಾನು ನಿಮ್ಮನ್ನು ಎಲ್ಲಾ ಜನಾಂಗಗಳೊಳಗಿಂದ ಪ್ರತ್ಯೇಕಿಸಿ, ಸ್ವಕೀಯಜನರನ್ನಾಗಿ ಮಾಡಿಕೊಂಡಿದ್ದೇನೆಂದು ಮೋಶೆಯ ಮುಖಾಂತರವಾಗಿ ಹೇಳಿದಿಯಲ್ಲವೇ” ಎಂದು ದೇವರನ್ನು ಪ್ರಾರ್ಥಿಸಿದನು.
54ಸೊಲೊಮೋನನು ಆಕಾಶದ ಕಡೆಗೆ ಕೈಯೆತ್ತಿ ಯೆಹೋವನ ಯಜ್ಞವೇದಿಯ ಮುಂದೆ ಮೊಣಕಾಲೂರಿ ಯೆಹೋವನನ್ನು ಪ್ರಾರ್ಥಿಸಿದ ನಂತರ ಎದ್ದು ನಿಂತು
55ಇಸ್ರಾಯೇಲ್ ಸರ್ವಸಮೂಹದವರನ್ನು ಆಶೀರ್ವದಿಸಿ ಗಟ್ಟಿಯಾಗಿ ಹೇಳಿದ್ದೇನಂದರೆ,
56“ತಾನು ವಾಗ್ದಾನ ಮಾಡಿದಂತೆ ತನ್ನ ಪ್ರಜೆಗಳಾದ ಇಸ್ರಾಯೇಲರಿಗೆ ವಿಶ್ರಾಂತಿಯನ್ನು ಅನುಗ್ರಹಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಸೇವಕನಾದ ಮೋಶೆಯ ಮುಖಾಂತರವಾಗಿ ಮಾಡಿದ ಅತಿ ಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿ ಹೋಗಲಿಲ್ಲ.
57ನಮ್ಮ ದೇವರಾದ ಯೆಹೋವನು ನಮ್ಮ ಪೂರ್ವಿಕರ ಸಂಗಡ ಇದ್ದ ಹಾಗೆ ನಮ್ಮ ಸಂಗಡಲೂ ಇರಲಿ, ಆತನು ನಮ್ಮನ್ನು ಕೈಬಿಡದಿರಲಿ, ನಿರಾಕರಿಸದಿರಲಿ.
58ನಾವು ನಮ್ಮ ಪೂರ್ವಿಕರಿಗೆ ಕೊಡಲ್ಪಟ್ಟ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವಂತೆ ನಮ್ಮ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿಕೊಳ್ಳಿಲಿ.
59ನಾನು ಈಗ ನಮ್ಮ ದೇವರಾದ ಯೆಹೋವನಿಗೆ ಮಾಡಿದ ವಿಜ್ಞಾಪನೆಯು ಹಗಲಿರುಳು ಆತನ ಜ್ಞಾಪಕದಲ್ಲಿರಲಿ.
60ಭೂಲೋಕದ ಜನರೆಲ್ಲರೂ ಯೆಹೋವನ ಹೊರತು ಬೇರೆ ದೇವರಿಲ್ಲವೆಂಬುದನ್ನು ತಿಳಿದುಕೊಳ್ಳುವಂತೆ ಆತನು ಅಗತ್ಯವಿರುವಾಗೆಲ್ಲಾ ತನ್ನ ಸೇವಕನ ಮತ್ತು ಪ್ರಜೆಗಳಾದ ಇಸ್ರಾಯೇಲರ ನ್ಯಾಯವನ್ನು ಸ್ಥಾಪಿಸುತ್ತಾ ಬರಲಿ.
61ನೀವಾದರೋ ಈಗಿನಂತೆ ಮುಂದೆಯೂ ನಮ್ಮ ದೇವರಾದ ಯೆಹೋವನಲ್ಲಿ ಪೂರ್ಣ ಭಯಭಕ್ತಿಯುಳ್ಳವರಾಗಿ, ಆತನ ವಿಧಿಗಳನ್ನು ಅನುಸರಿಸಿ, ಆತನ ಆಜ್ಞೆಗಳನ್ನು ಕೈಕೊಳ್ಳಿರಿ” ಎಂಬುದೇ.
62ಆನಂತರ ಅರಸನೂ, ಎಲ್ಲಾ ಇಸ್ರಾಯೇಲರೂ ಯೆಹೋವನ ಸನ್ನಿಧಿಯಲ್ಲಿ ಯಜ್ಞಮಾಡಿದರು.

Read 1 ಅರಸು 81 ಅರಸು 8
Compare 1 ಅರಸು 8:46-621 ಅರಸು 8:46-62