Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - 1 ಕೊರಿ - 1 ಕೊರಿ 10

1 ಕೊರಿ 10:10-27

Help us?
Click on verse(s) to share them!
10ಇದಲ್ಲದೆ ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕ ದೂತನ ಕೈಯಿಂದ ನಾಶವಾದರು. ನೀವು ಗುಣಗುಟ್ಟಬೇಡಿರಿ.
11ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ. ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಇದು ಎಚ್ಚರಿಕೆಯ ಮಾತುಗಳಾಗಿ ಬರೆದಿವೆ.
12ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳದಂತೆ ಎಚ್ಚರಿಕೆಯಾಗಿರಲಿ.
13ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.
14ಆದ್ದರಿಂದ ಪ್ರಿಯರೇ, ವಿಗ್ರಹಾರಾಧನೆಯನ್ನು ಬಿಟ್ಟು ದೂರವಾಗಿರಿ.
15ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ. ನಾನು ಹೇಳುವುದನ್ನು ನೀವೇ ಯೋಚಿಸಿರಿ.
16ನಾವು ದೇವರ ಸ್ತೋತ್ರಮಾಡಿ ಪಾನಪಾತ್ರೆಯಲ್ಲಿ ಪಾನ ಮಾಡುವುದು ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ? ನಾವು ರೊಟ್ಟಿಯನ್ನು ಮುರಿದು ತಿನ್ನುವುದು ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ?
17ರೊಟ್ಟಿ ಒಂದೇ ಆಗಿರುವ ಹಾಗೆ ಅನೇಕರಾಗಿರುವ ನಾವೆಲ್ಲರು ಒಂದೇ ದೇಹದಂತಿದ್ದೇವೆ. ಯಾಕೆಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲು ತೆಗೆದುಕೊಂಡು ತಿನ್ನುತ್ತೇವೆ.
18ಇಸ್ರಾಯೇಲ್ಯ ಜನರ ಕುರಿತು ಯೋಚಿಸಿರಿ. ಯಜ್ಞಮಾಡಿದ್ದನ್ನು ತಿನ್ನುವವರು ಯಜ್ಞವೇದಿಯೊಡನೆ ಪಾಲುಗಾರರಾಗಿದ್ದಾರಲ್ಲವೇ.
19ಹಾಗಾದರೆ ನಾನು ಏನು ಹೇಳಿದ ಹಾಗಾಯಿತು? ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥವು ವಾಸ್ತವವೆಂದೋ ಅಥವಾ ವಿಗ್ರಹವು ವಾಸ್ತವವೆಂದು ನನ್ನ ಅಭಿಪ್ರಾಯವೋ? ಅಲ್ಲ,
20ಆದರೆ ಅನ್ಯಜನರು ತಾವು ಅರ್ಪಿಸುವ ಬಲಿಗಳನ್ನು ದೇವರಿಗಲ್ಲ, ದೆವ್ವಗಳಿಗೆ ಅರ್ಪಿಸುತ್ತಾರೆಂಬುದು ನನ್ನ ಅಭಿಪ್ರಾಯವು. ನೀವು ದೆವ್ವಗಳೊಡನೆ ಪಾಲುಗಾರರಾಗಿರಬೇಕೆಂಬುದು ನನ್ನ ಇಷ್ಟವಲ್ಲ.
21ನೀವು ಕರ್ತನ ಪಾನಪಾತ್ರೆಯಲ್ಲಿಯೂ ಹಾಗೂ ದೆವ್ವಗಳ ಪಾನಪಾತ್ರೆಯಲ್ಲಿಯೂ ಕುಡಿಯಲಾರಿರಿ. ಕರ್ತನ ಪಂಕ್ತಿಯಲ್ಲಿಯೂ ಮತ್ತು ದೆವ್ವಗಳ ಪಂಕ್ತಿಯಲ್ಲಿಯೂ ಊಟಮಾಡಲಾರಿರಿ.
22ಕರ್ತನಿಗೆ ಕೋಪವನ್ನುಂಟುಮಾಡಿ ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೋ?
23“ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಅಧಿಕಾರವುಂಟು.” ಆದರೆ ಎಲ್ಲವೂ ಪ್ರಯೋಜನಕರವಾಗಿರುವುದಿಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಅಧಿಕಾರವುಂಟು” ಆದರೆ ಎಲ್ಲವೂ ಜನರನ್ನು ಭಕ್ತಿಯಲ್ಲಿ ಬೆಳೆಸುವುದಿಲ್ಲ.
24ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೇ ಪರಹಿತವನ್ನು ಚಿಂತಿಸಲಿ.
25ಮಾಂಸದ ಅಂಗಡಿಯಲ್ಲಿ ಮಾರುವಂಥದ್ದು ಏನಿದ್ದರೂ ಅದನ್ನು ಮನಸ್ಸಾಕ್ಷಿಯಲ್ಲಿ ಸಂಶಯ ಹುಟ್ಟಿಸುವಂತೆ ವಿಚಾರ ಮಾಡದೇ ತಿನ್ನಿರಿ.
26“ಭೂಮಿಯು ಅದರಲ್ಲಿರುವ ಸಮಸ್ತವೂ ಕರ್ತನದಲ್ಲವೇ.”
27ಕ್ರಿಸ್ತನನ್ನು ನಂಬದವರಲ್ಲಿ ಒಬ್ಬನು ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವುದಕ್ಕೆ ನಿಮಗಿಷ್ಟವಿದ್ದರೆ ನಿಮಗೇನು ಬಡಿಸಿದರೂ ಮನಸ್ಸಾಕ್ಷಿಯನ್ನು ಪ್ರಶ್ನಿಸದೇ ಅದನ್ನು ತಿನ್ನಿರಿ.

Read 1 ಕೊರಿ 101 ಕೊರಿ 10
Compare 1 ಕೊರಿ 10:10-271 ಕೊರಿ 10:10-27