Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - 1 ಯೋಹಾ - 1 ಯೋಹಾ 5

1 ಯೋಹಾ 5:13-21

Help us?
Click on verse(s) to share them!
13ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಟ್ಟಿರುವವರಾದ ನಿಮ್ಮಲ್ಲಿ ಆ ನಿತ್ಯಜೀವ ಉಂಟೆಂಬುದು ಗೊತ್ತಾಗುವುದಕ್ಕಾಗಿ ನಿಮಗೆ ಈ ವಿಷಯಗಳನ್ನು ಬರೆದಿದ್ದೇನೆ.
14ಮತ್ತು ದೇವರ ಚಿತ್ತಾನುಸಾರವಾಗಿ ಏನಾದರೂ ಬೇಡಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬ ಭರವಸೆಯು ಆತನಲ್ಲಿ ನಮಗುಂಟು.
15ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬುದು ನಮಗೆ ತಿಳಿದಿದ್ದರೆ, ನಾವು ಬೇಡಿದವುಗಳು ಆತನಿಂದ ನಮಗೆ ದೊರೆಯುತ್ತವೆಂಬುದು ನಮಗೆ ತಿಳಿಯುತ್ತದೆ.
16ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವುದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ. ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳಬೇಕೆಂದು ನಾನು ಹೇಳುವುದಿಲ್ಲ.
17ನೀತಿಗೆ ವಿರುದ್ಧವಾದದ್ದೆಲ್ಲವೂ ಪಾಪವಾಗಿದೆ. ಆದರೂ ಮರಣಕರವಲ್ಲದ ಪಾಪವುಂಟು.
18ದೇವರಿಂದ ಹುಟ್ಟಿರುವವನು ಪಾಪಮಾಡುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವನು ತನ್ನನ್ನು ತಾನು ಕಾಪಾಡಿಕೊಳ್ಳುವನು. ಕೆಡುಕನು ಅವನನ್ನು ಮುಟ್ಟುವುದಿಲ್ಲ.
19ಇಡೀ ಲೋಕವು ಕೆಡುಕನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂಬುದು ನಮಗೆ ತಿಳಿದಿದೆ.
20ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.
21ಪ್ರಿಯಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.

Read 1 ಯೋಹಾ 51 ಯೋಹಾ 5
Compare 1 ಯೋಹಾ 5:13-211 ಯೋಹಾ 5:13-21