Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - 2 ಅರಸು - 2 ಅರಸು 10

2 ಅರಸು 10:29-35

Help us?
Click on verse(s) to share them!
29ಆದರೂ ಯೇಹುವು ಇಸ್ರಾಯೇಲರನ್ನು ಬೇತೇಲ್ ಮತ್ತು ದಾನ್ ಊರುಗಳಲ್ಲಿದ್ದ ಚಿನ್ನದ ಬಸವನನ್ನು ಪೂಜಿಸಿ ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಅದನ್ನು ಅನುಸರಿಸಿದನು.
30ಯೆಹೋವನು ಯೇಹುವಿಗೆ, “ನೀನು ನನ್ನ ದೃಷ್ಟಿಗೆ ಹಿತಕರವಾದದ್ದನ್ನು ನಡಿಸಿ ನನ್ನ ಮೆಚ್ಚಿಕೆಯನ್ನು ಪಡೆದಿರುವೆ. ಅಹಾಬನ ಮನೆಯವರನ್ನು ಕುರಿತು ನನ್ನ ಚಿತ್ತವನ್ನು ನೆರವೇರಿಸಿದ್ದೀ. ಆದುದರಿಂದ ನಿನ್ನ ಸಂತಾನದವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು” ಎಂದು ಹೇಳಿದನು.
31ಆದರೆ ಯೇಹುವು ಇಸ್ರಾಯೇಲರ ದೇವರಾದ ಯೆಹೋವನ ಧರ್ಮನಿಯಮಗಳನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವುದಕ್ಕೆ ಮನಸ್ಸುಮಾಡಲು ಪ್ರಯತ್ನಿಸಲಿಲ್ಲ. ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲೂ ಇಲ್ಲ.
32ಯೆಹೋವನು ಆ ಕಾಲದಲ್ಲಿ ಇಸ್ರಾಯೇಲರನ್ನು ಕುಗ್ಗಿಸತೊಡಗಿದನು. ಹಜಾಯೇಲನು ಬಂದು ಇಸ್ರಾಯೇಲರನ್ನು ಇಸ್ರಾಯೇಲರ ಮೇರೆಗಳಲ್ಲಿ ಸೋಲಿಸಿದನು.
33ಯೊರ್ದನ್ ನದಿಯ ಪೂರ್ವದಿಕ್ಕಿಗೂ, ಅರ್ನೋನ್ ತಗ್ಗಿನ ಅರೋಯೇರ್ ಪಟ್ಟಣದ ಉತ್ತರದಿಕ್ಕಿಗೂ ಇರುವ ಗಿಲ್ಯಾದ್, ಬಾಷಾನ್ ಪ್ರಾಂತ್ಯಗಳಲ್ಲಿ ವಾಸವಾಗಿದ್ದ ಗಾದ್, ರೂಬೇನ್ ಮತ್ತು ಮನಸ್ಸೆ ಕುಲಗಳವರನ್ನೂ, ಬೇರೆ ಎಲ್ಲಾ ಪ್ರಾಂತ್ಯಗಳಲ್ಲಿರುವ ಇಸ್ರಾಯೇಲರನ್ನೂ ಬಾಧಿಸಿದನು.
34ಯೇಹುವಿನ ಉಳಿದ ಚರಿತ್ರೆಯೂ, ಅವನ ಶೂರಕೃತ್ಯಗಳ ವಿವರವೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.
35ಯೇಹುವು ಪೂರ್ವಿಕರ ಬಳಿಗೆ ಸೇರಲು, ಅವನ ಶವವನ್ನು ಸಮಾರ್ಯದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೆಹೋವಾಹಾಜನು ಅರಸನಾದನು.

Read 2 ಅರಸು 102 ಅರಸು 10
Compare 2 ಅರಸು 10:29-352 ಅರಸು 10:29-35