Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - 2 ಅರಸು - 2 ಅರಸು 11

2 ಅರಸು 11:7-16

Help us?
Click on verse(s) to share them!
7ಇದಲ್ಲದೆ, ಸಬ್ಬತ್ ದಿನದಲ್ಲಿ ಅರಸನೊಂದಿಗೆ ಯೆಹೋವನ ಆಲಯವನ್ನು ಕಾಯುವುದಕ್ಕಾಗಿ ಬರುವ ಸೈನ್ಯವು ಇಬ್ಬಗೆಯಾಗಿದ್ದುಕೊಂಡು ಯೆಹೋವನ ಆಲಯವನ್ನು ಕಾಯಬೇಕು.
8ನೀವು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅವನ ಸುತ್ತಲೂ ನಿಂತು, ಅವನ ಗುಂಪಿನಲ್ಲಿ ನುಗ್ಗುವಂತವನನ್ನು ಸಂಹರಿಸಬೇಕು. ಅರಸನು ಹೊರಗೆ ಹೋಗಿ ಬರುವಾಗಲೆಲ್ಲಾ ನೀವು ಅವನ ಜೊತೆಯಲ್ಲೇ ಇರಬೇಕು. ಇದೇ ನನ್ನ ಅಪ್ಪಣೆ” ಎಂದು ಹೇಳಿದನು.
9ಯಾಜಕನಾದ ಯೆಹೋಯಾದಾಮನು ಆಜ್ಞಾಪಿಸಿದಂತೆ, ಶತಾಧಿಪತಿಗಳು ಸಬ್ಬತ್ ದಿನದಲ್ಲಿ ಮನೆಗೆ ಹೋಗತಕ್ಕ ಮತ್ತು ಕಾಯುವುದಕ್ಕಾಗಿ ಬರತಕ್ಕ ಸಿಪಾಯಿಗಳನ್ನು ಕರೆದುಕೊಂಡು ರಾಜಪುತ್ರನ ಬಳಿಗೆ ಬಂದರು.
10ಯಾಜಕನಾದ ಯೆಹೋಯಾದಾವನು ಆ ಶತಾಧಿಪತಿಗಳಿಗೆ ಯೆಹೋವನ ಆಲಯದಲ್ಲಿ ಇಡಲ್ಪಟ್ಟಿದ್ದ ರಾಜನಾದ ದಾವೀದನ ಬರ್ಜಿಯನ್ನೂ, ಗುರಾಣಿಗಳನ್ನೂ ಕೊಟ್ಟನು.
11ಕಾವಲುದಂಡಿನವರು ಆಯುಧ ಹಿಡಿದುಕೊಂಡು ಅರಸನನ್ನು ಕಾಯುವುದಕ್ಕೋಸ್ಕರ ದೇವಾಲಯದ ದಕ್ಷಿಣ ದಿಕ್ಕಿನ ಮೂಲೆಯಿಂದ ಯಜ್ಞವೇದಿಯವರೆಗೂ, ಅಲ್ಲಿಂದ ಉತ್ತರ ದಿಕ್ಕಿನ ಮೂಲೆಯವರೆಗೂ ಸಾಲಾಗಿ ನಿಂತರು.
12ಯೆಹೋಯಾದಾವನು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು, ಅವನ ತಲೆಯ ಮೇಲೆ ಕಿರೀಟವನ್ನು ಇಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜ್ಯಾಭಿಷೇಕ ಮಾಡಿದನು. ಕೂಡಲೆ ಜನರು ಚಪ್ಪಾಳೆ ತಟ್ಟುತ್ತಾ, “ಅರಸನು ಚಿರಂಜೀವಿಯಾಗಿರಲಿ” ಎಂದು ಕೂಗಿದರು.
13ಅತಲ್ಯಳು ಕಾವಲುದಂಡಿನವರ ಮತ್ತು ಇತರ ಜನರ ಗದ್ದಲವನ್ನು ಕೇಳಿ ಅವರು ಸೇರಿ ಬಂದಿದ್ದ ಯೆಹೋವನ ಆಲಯಕ್ಕೆ ಬಂದಳು.
14ಅಲ್ಲಿ ಅರಸನು ಪದ್ದತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಅಧಿಪತಿಗಳೂ, ತುತ್ತೂರಿಯನ್ನು ಊದುವವರೂ ಅರಸನ ಹತ್ತಿರ ನಿಂತಿದ್ದರು. ದೇಶದ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.
15ಆಗ ಯಾಜಕನಾದ ಯೆಹೋಯಾದಾವನು ಸೇನಾನಿಗಳಾದ, ಶತಾಧಿಪತಿಗಳಿಗೆ, “ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ ಸಿಪಾಯಿಗಳ ಮಧ್ಯದಲ್ಲಿ ಆಕೆಯನ್ನು ಹೊರಗೆ ಕರೆದುಕೊಂಡು ಹೋಗಿರಿ ಮತ್ತು ಆಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ” ಎಂದು ಆಜ್ಞಾಪಿಸಿದನು.
16ಅವರು ಆಕೆಯನ್ನು ಹಿಡಿದು ಕುದುರೆಗಳ ಬಾಗಿಲಿನಿಂದ ರಾಜನ ಅರಮನೆಗೆ ಕರೆದೊಯ್ದು ಅಲ್ಲಿ ಹತ್ಯೆ ಮಾಡಿದರು.

Read 2 ಅರಸು 112 ಅರಸು 11
Compare 2 ಅರಸು 11:7-162 ಅರಸು 11:7-16