Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - 2 ಅರಸು - 2 ಅರಸು 14

2 ಅರಸು 14:3-6

Help us?
Click on verse(s) to share them!
3ಇವನು ತನ್ನ ತಂದೆಯಾದ ಯೆಹೋವಾಷನ ಮಾರ್ಗದಲ್ಲಿ ತಪ್ಪದೆ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾದನು, ಆದರೂ ತನ್ನ ಪೂರ್ವಿಕನಾದ ದಾವೀದನಷ್ಟು ಉತ್ತಮನಾಗಿರಲಿಲ್ಲ.
4ಇವನ ಕಾಲದಲ್ಲಿ ಪೂಜಾಸ್ಥಳಗಳು ಇನ್ನೂ ತೆಗೆಯಲ್ಪಟ್ಟಿರಲಿಲ್ಲ, ಆದ್ದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.
5ಅವನು ರಾಜ್ಯವನ್ನು ಭದ್ರಪಡಿಸಿಕೊಂಡ ಕೂಡಲೇ ತನ್ನ ತಂದೆಯನ್ನು ಕೊಂದ ಸೇವಕರಿಗೆ ಮರಣದಂಡನೆ ವಿಧಿಸಿದನು.
6ಮೋಶೆಯ ಧರ್ಮನಿಯಮಗ್ರಂಥದಲ್ಲಿರುವ ಯೆಹೋವನ ಅಪ್ಪಣೆಯಂತೆ, “ಮಕ್ಕಳ ಪಾಪದ ದೆಸೆಯಿಂದ ತಂದೆಗೂ, ತಂದೆಯ ಪಾಪದ ದೆಸೆಯಿಂದ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು” ಎಂಬುದನ್ನು ನೆನಪುಮಾಡಿಕೊಂಡು ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ.

Read 2 ಅರಸು 142 ಅರಸು 14
Compare 2 ಅರಸು 14:3-62 ಅರಸು 14:3-6