Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - 2 ಕೊರಿ - 2 ಕೊರಿ 11

2 ಕೊರಿ 11:8-16

Help us?
Click on verse(s) to share them!
8ನಿಮಗೆ ಸೇವೆಮಾಡುವುದಕ್ಕೋಸ್ಕರ ನಾನು ಬೇರೆ ಸಭೆಗಳಿಂದ ನೆರವು ಪಡೆಯುತ್ತಿದ್ದೆ, ನಿಮಗೋಸ್ಕರ ಇತರ ಸಭೆಗಳಿಂದ ಹಣ ವಸೂಲಿಮಾಡುತ್ತಿದ್ದೆ.
9ನಾನು ನಿಮ್ಮಲ್ಲಿದ್ದಾಗ ಖರ್ಚಿಗೆ ಏನೂ ಇಲ್ಲದ ಸಮಯದಲ್ಲಿ ಯಾರ ಮೇಲೆಯೂ ಭಾರ ಹಾಕಲಿಲ್ಲ. ಮಕೆದೋನ್ಯದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನೂ ಕೊಟ್ಟರು. ನಾನು ನಿಮಗೆ ಯಾವುದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು. ಇನ್ನು ಮೇಲೆಯೂ ನೋಡಿಕೊಳ್ಳುವೆನು.
10ಈ ನನ್ನ ಹೊಗಳಿಕೆಯನ್ನು ಅಖಾಯದ ಪ್ರಾಂತ್ಯಗಳಲ್ಲಿ ಒಬ್ಬರೂ ತಡೆಯಲಾರರೆಂದು ಕ್ರಿಸ್ತನ ಮುಂದೆ ಸತ್ಯವಾಗಿ ಹೇಳುತ್ತೇನೆ.
11ನಿಮ್ಮಿಂದ ನಾನು ಏನನ್ನೂ ತೆಗೆದುಕೊಳ್ಳುತ್ತಿಲ್ಲವೇಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ಇಲ್ಲ, ನಿಮ್ಮ ಮೇಲೆ ನಮಗಿರುವ ಪ್ರೀತಿ ಎಷ್ಟೆಂದು ದೇವರೇ ಬಲ್ಲನು.
12ಕೆಲವರು ತಾವು ಮಾಡುತ್ತಿರುವ ಕಾರ್ಯ, ನಾವು ಅಪೊಸ್ತಲರಾಗಿ ಮಾಡುತ್ತಿರುವ ಕಾರ್ಯಕ್ಕೆ ಸರಿಸಮವೆಂದು ವಾದಿಸಲು ಅವಕಾಶವನ್ನು ಹುಡುಕುತ್ತಿದ್ದಾರೆ. ಹುಡುಕುವವರಿಗೆ ಯಾವ ಆಸ್ಪದವೂ ಸಿಕ್ಕದಂತೆ ನಾನೀಗ ಮಾಡುತ್ತಿರುವುದನ್ನೇ ಮುಂದುವರಿಸಿಕೊಂಡು ಹೋಗುತ್ತೇನೆ.
13ಆದರೆ ಅಂಥವರು ಸುಳ್ಳು ಅಪೊಸ್ತಲರೂ, ಮೋಸಗಾರರಾದ ಕೆಲಸದವರೂ, ಕ್ರಿಸ್ತನ ಅಪೊಸ್ತಲರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವವರೂ ಆಗಿದ್ದಾರೆ.
14ಇದೇನೂ ಆಶ್ಚರ್ಯವಲ್ಲ. ಸೈತಾನನು ತಾನೇ ಪ್ರಕಾಶ ರೂಪವುಳ್ಳ ದೇವದೂತನ ವೇಷವನ್ನು ಹಾಕಿಕೊಳ್ಳುವಾಗ,
15ಅವನ ಸೇವಕರೂ ಸಹ ನೀತಿಗೆ ಸೇವಕರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವುದು ಆಶ್ಚರ್ಯವೇನಲ್ಲ. ಅವರ ಅಂತ್ಯಾವಸ್ಥೆಯು ಅವರ ಕೃತ್ಯಗಳಿಗೆ ತಕ್ಕಂತೆಯೇ ಇರುವುದು.
16ಯಾರೂ ನನ್ನನ್ನು ಬುದ್ಧಿಹೀನನೆಂದು ತಿಳಿಯಬಾರದೆಂದು ತಿರುಗಿ ಹೇಳುತ್ತೇನೆ. ಹಾಗೆ ನೆನಸಿದರೂ ಚಿಂತೆಯಿಲ್ಲ. ನನ್ನನ್ನು ಬುದ್ಧಿಹೀನನಾಗಿಯೇ ಸ್ವೀಕರಿಸಿ. ಆಗ ನಾನು ಆತ್ಮ ಪ್ರಶಂಸೆ ಮಾಡಿಕೊಳ್ಳಲು ಅಲ್ಪಸ್ವಲ್ಪವಾದರೂ ಆಸ್ಪದವಾಗುತ್ತದೆ.

Read 2 ಕೊರಿ 112 ಕೊರಿ 11
Compare 2 ಕೊರಿ 11:8-162 ಕೊರಿ 11:8-16