14ನೀವು ಕ್ರಿಸ್ತ ನಂಬಿಕೆಯಿಲ್ಲದವರೊಂದಿಗೆ ಸೇರಿ ಇಜ್ಜೋಡಿಯಾಗಬೇಡಿರಿ. ಧರ್ಮಕ್ಕೂ, ಅಧರ್ಮಕ್ಕೂ ಸಹವಾಸವೇನು?
15ಬೆಳಕಿಗೂ, ಕತ್ತಲೆಗೂ ಅನ್ಯೋನ್ಯತೆಯೇನು? ಕ್ರಿಸ್ತನಿಗೂ ಸೈತಾನನಿಗೂ ಒಪ್ಪಂದವೇನು? ವಿಶ್ವಾಸಿಗೂ ಅವಿಶ್ವಾಸಿಗೂ ಪಾಲುಗಾರಿಕೆಯೇನು?
16ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ.
17ಆದ್ದರಿಂದ, “ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ.