Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - 2 ಸಮು

2 ಸಮು 23

Help us?
Click on verse(s) to share them!
1ದಾವೀದನ ಕೊನೆಯ ಮಾತುಗಳು - ಇಷಯನ ಮಗನಾದ ದಾವೀದನು, ಉನ್ನತ ಸ್ಥಾನದಲ್ಲಿ ಸ್ಥಾಪಿಸಲ್ಪಟ್ಟವನು, ಯಾಕೋಬನ ದೇವರಿಂದ ಅಭಿಷೇಕಿಸಲ್ಪಟ್ಟವನೂ, ಇಸ್ರಾಯೇಲ್ಯರ ವರಕವಿಯೂ ಆಗಿರುವವನ ನುಡಿಗಳು:
2“ಯೆಹೋವನ ಆತ್ಮವು ನನ್ನ ಮೂಲಕ ಮಾತನಾಡಿತು. ಆತನ ವಾಕ್ಯವು ನನ್ನ ಬಾಯಲ್ಲಿತ್ತು.
3ಇಸ್ರಾಯೇಲರ ಶರಣನೂ, ದೇವರೂ ಆಗಿರುವಾತನು ಹೇಳಿದ್ದೇನೆಂದರೆ, ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಜನರನ್ನು ನೀತಿಯಿಂದ ಆಳುವವನು,
4ಮೋಡಗಳಿಲ್ಲದ ಪ್ರಾತಃಕಾಲದಲ್ಲಿ ತೇಜೋಮಯನಾಗಿ ಉದಯಿಸಿ, ಮೋಡಗಳನ್ನು ಚದುರಿಸಿಬಿಟ್ಟು, ಮಳೆಬಿದ್ದ ಭೂಮಿಯಿಂದ ಹುಲ್ಲನ್ನು ಮೊಳೆಯಿಸುವ ಸೂರ್ಯನಿಗೆ ಸಮಾನನಾಗಿದ್ದಾನೆ.
5ನನ್ನ ಮನೆಯು ಯೆಹೋವನ ಸನ್ನಿಧಿಯಲ್ಲಿ ಹೀಗೆಯೇ ಸ್ಥಿರವಾಗಿರುತ್ತದಲ್ಲವೇ? ಆತನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿದ್ದಾನಲ್ಲವೋ? ಅದು ಎಂದಿಗೂ ಬಿದ್ದುಹೋಗದೆ ಎಲ್ಲಾ ವಿಷಯಗಳಲ್ಲಿಯೂ ಖಚಿತವಾಗಿರುತ್ತದೆ. ನನ್ನ ರಕ್ಷಣೆಯ ಮೂಲವೂ, ನನ್ನ ಅಭಿಲಾಷೆಯನ್ನು ಪೂರ್ತಿಗೊಳಿಸುವವನೂ ಆತನೇ ಅಲ್ಲವೋ?
6ದುಷ್ಟರು ದೂರಕ್ಕೆ ಬಿಸಾಡಲ್ಪಟ್ಟ ಮುಳ್ಳುಗಳಂತಿರುತ್ತಾರೆ. ಅವುಗಳನ್ನು ಹಿಡಿಯಬೇಕೆಂದಿರುವವನು ತನ್ನ ಕೈಯಿಂದ ಹಿಡಿಯಲಾರದೆ,
7ಕಬ್ಬಿಣದ ಆಯುಧವನ್ನೂ, ಬರ್ಜಿಯ ಹಿಡಿಯನ್ನೂ ಉಪಯೋಗಿಸಬೇಕು. ಅವು ಬಿದ್ದಲ್ಲಿಯೇ ಬೆಂಕಿಯಿಂದ ಸುಟ್ಟುಹೋಗುವವು.”
8ದಾವೀದನೊಂದಿಗಿದ್ದ ರಣವೀರರ ಪಟ್ಟಿ: ತಹ್ಕೆಮೋನ್ಯನಾದ ಯೋಷಬ್ ಬಷ್ಬೆಬೆತನು ಸರದಾರರಲ್ಲಿ ಮುಖ್ಯಸ್ಥನು. ಎಚ್ನೀಯನಾದ ಅದೀನೋ ಅನ್ನಿಸಿಕೊಳ್ಳುವ ಇವನು ಒಂದೇ ಸಾರಿ ಎಂಟುನೂರು ಮಂದಿಯನ್ನು ಕೊಂದನು.
9ಎರಡನೆಯವನು ಅಹೋಹ್ಯನಾದ ದೋದೋ ಎಂಬುವವನ ಮಗನಾಗಿರುವ ಎಲ್ಲಾಜಾರನು. ಫಿಲಿಷ್ಟಿಯರು ಯುದ್ಧಕ್ಕೆ ಕೂಡಿಕೊಂಡಾಗ ಅವರನ್ನು ನಿಂದಿಸುವುದಕ್ಕೆ ದಾವೀದನ ಜೊತೆಯಲ್ಲಿ ಹೋದ ಮೂರು ಮಂದಿ ಶೂರರಲ್ಲಿ ಇವನೂ ಒಬ್ಬನಾಗಿದ್ದನು.
10ಇಸ್ರಾಯೇಲರು ಹೋದ ನಂತರ ಇವನು ನಿಂತುಕೊಂಡು, ಕತ್ತಿ ಹಿಡಿದು, ಕೈ ಸೋತು ಹೋಗುವ ತನಕ ಫಿಲಿಷ್ಟಿಯರನ್ನು ಕೊಲ್ಲುತ್ತಲೇ ಇದ್ದನು. ಆ ದಿನದಲ್ಲಿ ಯೆಹೋವನು ಮಹಾಜಯವನ್ನುಂಟುಮಾಡಲು ಇಸ್ರಾಯೇಲರು ಸುಲಿದುಕೊಳ್ಳುವುದಕ್ಕಾಗಿ ಹಿಂದಿರುಗಿದರು.
11ಮೂರನೆಯವನು ಹರಾರ್ಯನಾದ ಆಗೇಯನ ಮಗ ಶಮ್ಮ ಎಂಬುವವನು. ಫಿಲಿಷ್ಟಿಯರು ದೊಡ್ಡ ಗುಂಪಾಗಿ ಒಂದು ಅಲಸಂದಿಯ ಹೊಲಕ್ಕೆ ಬಂದರು.
12ಇಸ್ರಾಯೇಲ್ಯರು ಅವರ ಎದುರಿನಿಂದ ಓಡಿಹೋದಾಗ, ಇವನು ಆ ಹೊಲದ ಮಧ್ಯದಲ್ಲೇ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದು, ಹೊಲವನ್ನು ಕಾಪಾಡಿದನು. ಹೀಗೆ ಯೆಹೋವನು ಮಹಾಜಯವನ್ನುಂಟುಮಾಡಿದನು.
13ಮೂವತ್ತು ಮಂದಿ ಪ್ರಸಿದ್ಧ ಶೂರರಲ್ಲಿ ದಾವೀದನು ಅದುಲ್ಲಾಮ್ ಗವಿಯಲ್ಲಿದ್ದಾಗ ಸುಗ್ಗಿಕಾಲದಲ್ಲಿ ಅವನ ಬಳಿಗೆ ಮೂವರು ಬಂದರು. ಫಿಲಿಷ್ಟಿಯರು ದಂಡೆತ್ತಿ ಬಂದು ರೆಫಾಯೀಮ್ ತಗ್ಗಿನಲ್ಲಿ ಪಾಳೆಯಮಾಡಿಕೊಂಡಾಗ,
14ದಾವೀದನು ಆ ಅದುಲ್ಲಾಮ್ ದುರ್ಗದಲ್ಲಿದ್ದನು. ಫಿಲಿಷ್ಟಿಯರು ಬೇತ್ಲೆಹೇಮಿನಲ್ಲಿ ಕಾವಲುದಂಡನ್ನಿಟ್ಟಿದ್ದರು.
15ಅದೇ ಸಮಯದಲ್ಲಿ ದಾವೀದನು ಲವಲವಿಕೆಯಿಂದ “ಬೇತ್ಲೆಹೇಮ್ ಊರಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದುಕೊಡುವುದಾದರೆ ಎಷ್ಟೋ ಒಳ್ಳೆಯದು” ಎಂದೂ ಕೇಳಿದನು.
16ಕೂಡಲೇ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿ ಹೋಗಿ, ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತಂದು ಕೊಟ್ಟರು.
17ಆದರೆ ಅವನು ಅದನ್ನು ಕುಡಿಯಲೊಲ್ಲದೆ, “ಯೆಹೋವನೇ, ಈ ನೀರನ್ನು ಕುಡಿಯುವುದು ನನಗೆ ದೂರವಾಗಿರಲಿ. ಜೀವದಾಶೆ ತೊರೆದವರ ರಕ್ತವನ್ನು ನಾನು ಕುಡಿಯಬೇಕೆ? ಇದನ್ನು ಕುಡಿಯುವುದೇ ಇಲ್ಲ” ಎಂದು ಹೇಳಿ, ಅದನ್ನು ಯೆಹೋವನ ಮುಂದೆ ಹೊಯ್ದನು. ಆ ಮೂರು ಜನರು ಪರಾಕ್ರಮಶಾಲಿಗಳಾಗಿದ್ದರು.
18ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯು ಈ ಮೂರು ಜನರಲ್ಲಿ ಮುಖ್ಯಸ್ಥನು. ಅವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ, ಮುನ್ನೂರು ಜನರನ್ನು ಕೊಂದು ಈ ಮೂವರಲ್ಲಿ ಕೀರ್ತಿಹೊಂದಿದನು.

19ಅ ಮೂವರಲ್ಲಿ ಘನತೆಯುಳ್ಳವನೂ, ನಾಯಕನೂ ಇವನೇ. ಇವನು ಮೊದಲಿನ ಮೂರು ಜನರಿಗಿಂತ ಹೆಚ್ಚು ಪ್ರಸಿದ್ಧನಾಗಿದ್ದನಲ್ಲವೇ?
20ಯೆಹೋಯಾದಾವನ ಮಗನೂ ಕಬ್ಜಯೇಲಿನ ಪರಾಕ್ರಮಶಾಲಿಯೂ ಆದ ಬೆನಾಯನು ಇನ್ನೊಬ್ಬನು. ಇವನು ಅನೇಕ ಶೂರಕೃತ್ಯಗಳನ್ನು ಮಾಡಿದನು. ಅದಕ್ಕೆ ದೃಷ್ಟಾಂತವೆಂದರೆ ಒಂದು ಸಾರಿ ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು.
21ಮತ್ತೊಮ್ಮೆ ಉನ್ನತನಾದ ಒಬ್ಬ ಐಗುಪ್ತ್ಯನನ್ನು ಕೊಂದನು. ಆ ಐಗುಪ್ತ್ಯನ ಕೈಯಲ್ಲಿ ಒಂದು ಬರ್ಜಿಯಿತ್ತು. ಇವನು ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಬರ್ಜಿಯನ್ನು ಕಿತ್ತುಕೊಂಡು ಅದರಿಂದ ಅವನನ್ನು ಕೊಂದನು.
22ಈ ಪರಾಕ್ರಮದ ಕೃತ್ಯದಿಂದ ಯೆಹೋಯಾದಾವನ ಮಗನಾದ ಬೆನಾಯನು ಈ ಮೂವರಲ್ಲಿ ಹೆಸರುವಾಸಿಯಾದನು.
23ಮೂವತ್ತು ಮಂದಿಯಲ್ಲಿ ಇವನು ವಿಶೇಷ ಕೀರ್ತಿಯನ್ನು ಹೊಂದಿದ್ದರೂ, ಮೊದಲಿನ ಮೂವರು ಸೈನಿಕರಿಗೆ ಸಮಾನನಾಗಿರಲಿಲ್ಲ. ದಾವೀದನು ಇವನನ್ನು ತನ್ನ ಕಾವಲುದಂಡಿನ ಮುಖ್ಯಸ್ಥನನ್ನಾಗಿ ಮಾಡಿದನು.
24ಮೂವತ್ತು ಮಂದಿ ರಣವೀರರ ಪಟ್ಟಿ - ಯೋವಾಬನ ತಮ್ಮನಾದ ಅಸಾಹೇಲನು,
25ಬೇತ್ಲೆಹೇಮಿನ ದೋದೋವಿನ ಮಗನಾದ ಎಲ್ಹಾನಾನ್, ಹರೋದಿನವರಾದ ಶಮ್ಮ ಮತ್ತು ಎಲೀಕರು.
26ಪೆಲೆಟಿನವನಾದ ಹೆಲೆಚ್, ತೆಕೋವದ ಇಕ್ಕೇಷನ ಮಗನಾದ ಈರಾ,
27ಅಣತೋತಿನವನಾದ ಅಬೀಯೆಜೆರ್, ಹುಷಾ ಊರಿನವನಾದ ಮೆಬುನ್ನೈ,
28ಅಹೋಹಿನವನಾದ ಚಲ್ಮೋನ್, ನೆಟೋಫದವನಾದ ಮಹರೈ,
29ನೆಟೋಫದವನಾದ ಬಾಣನ ಮಗ ಹೇಲೆಬ್, ಬೆನ್ಯಾಮೀನ್ ದೇಶದ ಗಿಬೆಯ ಊರಿನ ರೀಬೈ ಎಂಬುವನ ಮಗನಾದ ಇತ್ತೈ,
30ಪಿರಾತೋನ್ಯನಾದ ಬೆನಾಯ, ನಹಲೇ ಗಾಷಿನವನಾದ ಹಿದ್ದೈ.
31ಅರಾಬಾ ತಗ್ಗಿನವನಾದ ಅಬೀ ಅಲ್ಬೋನ್, ಬರ್ಹುಮ್ಯನಾದ ಅಜ್ಮಾವೇತ್,
32ಶಾಲ್ಬೋನ್ಯನಾದ ಎಲೆಯಖ್ಬಾ, ಯಾಷೇನನ ಮಕ್ಕಳು, ಯೋನಾತಾನನು,
33ಹರಾರ್ಯನಾದ ಶಮ್ಮ, ಅರಾರ್ಯನಾದ ಶಾರಾರನ ಮಗ ಅಹೀಯಾಮ್,
34ಮಾಕಾ ಊರಿನ ಅಹಸ್ಬೈ ಎಂಬುವನ ಮಗನಾದ ಎಲೀಫೆಲೆಟ್, ಗಿಲೋವಿನ ಅಹೀತೋಫೆಲ ಎಂಬುವನ ಮಗನಾದ ಎಲೀಯಾಮ್,
35ಕರ್ಮೆಲ್ಯನಾದ ಹೆಚ್ರೋ, ಅರ್ಬೀಯನಾದ ಪಾರೈ,
36ಚೋಬ ಊರಿನ ನಾತಾನ ಎಂಬುವನ ಮಗನಾದ ಇಗಾಲ್, ಗಾದ್ಯನಾದ ಬಾನೀ,

37ಅಮ್ಮೋನಿಯನಾದ ಚೆಲೆಕ್, ಬೇರೋತ್ಯನೂ ಚೆರೂಯಳ ಮಗನಾದ ಯೋವಾಬನ ಆಯುಧವಾಹಕನೂ ಆಗಿದ್ದ ನಹರೈ
38ಇತ್ರೀಯರಾದ ಈರಾ ಮತ್ತು ಗಾರೇಬರು,
39ಹಿತ್ತಿಯನಾದ ಊರೀಯ, ಒಟ್ಟಿಗೆ ಮೂವತ್ತೇಳು ಮಂದಿ.